4:30 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಂಡ್ಯ: ಕೆ.ಆರ್.ಪೇಟೆಯಲ್ಲಿ ರಾಷ್ಟ್ರಪಿತ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಮಹೋತ್ಸವ

03/10/2022, 00:05

ಸೈಯ್ಯದ್ ಖಲೀಲ್ ಕೃಷ್ಣರಾಜಪೇಟೆ ಮಂಡ್ಯ

info.reporterkarnataka@gmail.com

ಕೆ.ಆರ್.ಪೇಟೆ ಪಟ್ಟಣದ ಮಿನಿ ವಿಧಾನಸೌಧ

ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಮಹೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು .

ತಹಶೀಲ್ದಾರ್ ಎಂ.ವಿ.ರೂಪ ಇಬ್ಬರೂ ಮಹನೀಯರ ಭಾವಚಿತ್ರಗಳಿಗೆ ವಿಶೇಷ ಪೂಜೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಅಹಿಂಸಾ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿಯವರು ವಿಶ್ವಮಾನ್ಯ ನಾಯಕರಾಗಿದ್ದಾರೆ. ಜಾತಿ, ಮತ ಹಾಗೂ ಪಂಥಗಳಿಂದ ಮುಕ್ತವಾದ ಸಮಾನತೆಯಿಂದ ಕೂಡಿರುವ ಸಮ ಸಮಾಜವನ್ನು ನಿರ್ಮಾಣ ಮಾಡಲು ಪಣ ತೊಡಬೇಕು. ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಒಂದಾಗಿ ದುಡಿಯಬೇಕು. ಗುಡಿ ಕೈಗಾರಿಕೆಗಳು ಹಾಗೂ ಸ್ವದೇಶಿ ಉತ್ಪನ್ನಗಳ ತಯಾರಿಕೆ ಹಾಗೂ ಮಾರಾಟಕ್ಕೆ ಒತ್ತು ನೀಡಬೇಕು ಎಂದು ಸಂದೇಶ ನೀಡಿ ನುಡಿದಂತೆ ನಡೆದು ಖಾದಿ ಉತ್ಪನ್ನಗಳನ್ನು ಬಳಸಿ ಮಾದರಿಯಾಗಿ ಜೀವನ ನಡೆಸಿದ ರಾಷ್ಟ್ರಪಿತನ ಜೀವನದ ಆದರ್ಶಗಳನ್ನು ಯುವಜನರು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು. 

ದೇಶದ ಪ್ರಧಾನಮಂತ್ರಿಗಳಾಗಿ ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸಿದ ಶಾಸ್ತ್ರೀಜಿ ಅವರು ಭ್ರಷ್ಟಾಚಾರ ಮುಕ್ತವಾದ ದಕ್ಷ ಆಡಳಿತ ನೀಡಿ ಇತಿಹಾಸದ ಪುಟಗಳಲ್ಲಿ ದಾಖಲಾಗಿದ್ದಾರೆ. ಶಾಸ್ತ್ರೀಜಿ ಅವರ ಪ್ರಾಮಾಣಿಕತೆ ಹಾಗೂ ಕಾರ್ಯದಕ್ಷತೆಯನ್ನು ಯುವಜನರು ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದು ತಹಶೀಲ್ದಾರ್ ರೂಪ ಕರೆ ನೀಡಿದರು.

ಕೆ.ಆರ್.ಪೇಟೆ ತಾಲ್ಲೂಕು ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಡಾ.ನರಸಿಂಹರಾಜು ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜೀವನ ಸಾಧನೆಯನ್ನು ಕುರಿತು ಮಾತನಾಡಿದರು. 

ಪುರಸಭೆ ಮುಖ್ಯಾಧಿಕಾರಿ ಕುಮಾರ್, ಅಗ್ನಿಶಾಮಕ ಠಾಣಾಧಿಕಾರಿ ಶಿವಣ್ಣ, ಶಿಕ್ಷಣ ಸಂಯೋಜಕಿ ನೀಲಾಮಣಿ, ಪುರಸಭೆ ಸದಸ್ಯ ಕೆ.ಆರ್.ನೀಲಕಂಠ, ತಾಲ್ಲೂಕು ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷೆ ಚಂದ್ರಕಲಾ, ಮಂಡ್ಯ ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ಆರೋಗ್ಯ ಇಲಾಖೆಯ ರತ್ನ, ಉಪತಹಶೀಲ್ದಾರ್ ಲಕ್ಷ್ಮೀಕಾಂತ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು