12:34 AM Thursday23 - January 2025
ಬ್ರೇಕಿಂಗ್ ನ್ಯೂಸ್
7-8 ವರ್ಷ ಕಳೆದರೂ ಹಸ್ತಾಂತರವಾಗದ ಶಾಲಾ ಕೊಠಡಿ: ಮಾಹಿತಿ ಇಲ್ಲವೆಂದ ಬಿಇಒ; ಶಿಕ್ಷಣ… ಯುನಿಸೆಕ್ಸ್ ಸೆಲೂನ್ ದಾಳಿಕೋರರ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದ್ದೇನೆ: ಉಡುಪಿಯಲ್ಲಿ ಗೃಹ ಸಚಿವ… ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ: ಬೀದರ್ ನಲ್ಲಿ… ವರ್ಷದಲ್ಲಿ 2 ಲಕ್ಷ ಅಕ್ರಮ ಪಂಪ್ ಸೆಟ್ ಗಳು ಸಕ್ರಮ: ಇಂಧನ ಸಚಿವ… ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ: ಜಿಲ್ಲೆಯ ಶಾಸಕರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅಭಿನಂದನೆ ವಿಜಯಪುರ: ಫೇಕ್ ಡಾಕ್ಟರ್ ಇದ್ದಾರೆ ಎಚ್ಚರ; ನಾಲತವಾಡದಲ್ಲೂ ನಕಲಿ ವೈದ್ಯರುಗಳ ಹಾವಳಿ ಸ್ಥಳ ಮಹಜರು: ಕೋಟೆಕಾರು ದರೋಡೆ ಪ್ರಕರಣದ ಆರೋಪಿ ಪರಾರಿಗೆ ಯತ್ನ; ಪೊಲೀಸರ ಗುಂಡೇಟು,… ಕೋಟೆಕಾರು ದರೋಡೆ ಪ್ರಕರಣ: ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; 3 ಮಂದಿ ಆರೋಪಿಗಳ… ಗಾಂಧಿ ಭಾರತ ಮರು ನಿರ್ಮಾಣ ಕನ್ನಡ- ಆಂಗ್ಲ ಪುಸ್ತಕ ಬಿಡುಗಡೆ: ಬೃಹತ್ ಗಾಂಧಿ… ಕಾಂತಾರ: ಚಾಪ್ಟರ್ 1 ಸಿನಿಮಾ ತಂಡ ಷರತ್ತು ಉಲ್ಲಂಘಿಸಿದರೆ ಚಿತ್ರೀಕರಣ ಸ್ಥಗಿತ: ಅರಣ್ಯ…

ಇತ್ತೀಚಿನ ಸುದ್ದಿ

ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ: ಜಿಲ್ಲೆಯ ಶಾಸಕರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅಭಿನಂದನೆ

22/01/2025, 22:22

ಬೆಂಗಳೂರು(reporterkarnataka.com): ಸಚಿವ ಸಂಪುಟದಲ್ಲಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್‌ ಬಿಲ್‌ ರೂ. 52 ಕೋಟಿ ಮನ್ನಾ ಮಾಡಿರುವ ಹಿನ್ನೆಲೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಶಾಸಕರು ಇಂದು ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌,‌ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಶಾಸಕರಾದ ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ದರ್ಶನ್‌ ಪುಟ್ಡಣ್ಣಯ್ಯ, ಉದಯಗೌಡ, ರವಿಶಂಕರ್‌, ಹರೀಶ್‌ ಗೌಡ, ದಿನೇಶ ಗೂಳಿಗೌಡ, ಮಧು ಮಾದೇಗೌಡ, ಮೈಷುಗರ್‌ ಅಧ್ಯಕ್ಷ ಗಂಗಾಧರ್‌ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು