5:45 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಮಂಡ್ಯ: ಅಪ್ರಾಪ್ತ ವಯಸ್ಸಿನ ಪ್ರಿಯತಮೆ ಮನೆ ಎದುರು ಯುವಕ ಸ್ಫೋಟಿಸಿಕೊಂಡು ಆತ್ಮಹತ್ಯೆ

29/12/2024, 17:21

ಮಂಡ್ಯ(reporterkarnataka.com): ಪಾಗಲ್ ಪ್ರೇಮಿಯೊಬ್ಬ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಎದುರು ಜಿಲೆಟಿನ್ ಸ್ಫೋಟಿಸಿಕೊಂಡು
ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಸಮೀಪದ ನಾಗಮಂಗಲ ಬಳಿಯ ಗ್ರಾಮವೊಂದರಲ್ಲಿ‌ ಶನಿವಾರ)ರಾಮಚಂದ್ರು(21)ಎಂಬಾತ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಆತ ಬಳಸಿಕೊಂಡಿದ್ದಾನೆ.
ಜಿಲೆಟಿನ್ ಸ್ಫೋಟಕ್ಕೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಒಂದು ವರ್ಷದ ಹಿಂದೆ ಅಪ್ರಾಪ್ತೆ ವಯಸ್ಸಿನ ಪ್ರಿಯತಮೆಯನ್ನು
ಕರೆದೊಯ್ದ ಹಿನ್ನೆಲೆಯಲ್ಲಿ ರಾಮಚಂದ್ರು ವಿರುದ್ಧ ಫೋಕ್ಸೋ ಕೇಸ್ ದಾಖಲಾಗಿತ್ತು. ಫೋಕ್ಸೋ ಕೇಸ್‌ನಲ್ಲಿ 6 ತಿಂಗಳು ಜೈಲುವಾಸ ಅನುಭವಿಸಿದ್ದ. ಬಳಿಕ 2 ಕುಟುಂಬಗಳ ರಾಜಿ ಸಂಧಾನ ಬಳಿಕ ಕೇಸ್ ವಾಪಸ್ ಪಡೆಯಲಾಗಿತ್ತು. ನಂತರ ಅಪ್ರಾಪ್ತ ಪ್ರಿಯತಮೆ ರಾಮಚಂದ್ರನ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದರಿಂದ ಮನನೊಂದ ರಾಮಚಂದ್ರ ಶನಿವಾರ ಆಕೆಯ ಮುನೆಯ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಸ್ಥಳಕ್ಕೆ ಬಾಂಬ್ ಪತ್ತೆ ಹಾಗೂ ‌ನಿಷ್ಕ್ರಿಯ ದಳ‌ ದೌಡಾಯಿಸಿ ಸ್ಫೋಟಕ್ಕೆ ಬಳಸಿರುವ ವಸ್ತು ಹಾಗೂ ತೀವ್ರತೆ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದಾರೆ.
ಯುವಕ ಜಿಲೆಟಿನ್ ಸ್ಟೋಟಿಸಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಈ ಹಿಂದೆ ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತಯನ್ನೆ ಮನೆಯಿಂದ ಕರೆದುಕೊಂಡು ಹೋಗಿದ್ದ. ಈ ಸಂಬಂಧ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂರು ತಿಂಗಳು ಜೈಲಿನಲ್ಲಿ ಇದ್ದು ಬಂದಿದ್ದಾನೆ. ಆನಂತರ ಕುಟುಂಬಸ್ಥರು ರಾಜೀ ಮಾಡಿಕೊಂಡಿಕೊಂಡಿದ್ದರು .ಮೃತ ಯುವಕ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಸಹ ಸ್ನೇಹಿತರ ಜೊತೆ ಮದ್ಯಸೇವನೆ ಕೂಡ ಮಾಡಿದ್ದ. ಸ್ಟೋಟಕ ಎಲ್ಲಿ ಸಿಕ್ಕಿದೆ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಸ್ಪೋಟಕ ನೀಡಿದವರ ವಿರುದ್ಧ ಕೂಡ ಕ್ರಮ ತೆಗೆದುಕೊಳ್ಳಲಾಗುತ್ತದೆ
ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು