2:28 PM Monday6 - April 2026
ಬ್ರೇಕಿಂಗ್ ನ್ಯೂಸ್
Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ…

ಇತ್ತೀಚಿನ ಸುದ್ದಿ

ಮಂಡ್ಯ ಸಕ್ಕರೆ ಕಾರ್ಖಾನೆ ಖಾಸಗೀಕರಣ ಬೇಡ, ಹಾಲು ಒಕ್ಕೂಟದ ಪ್ರಕರಣ ತನಿಖೆಯಾಗಲಿ: ಮಾಜಿ ಸಂಸದ  ಶಿವರಾಮೇಗೌಡ

25/06/2021, 19:17

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ರಾಜ್ಯ ಬಿಜೆಪಿ ಸರಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರ ಮಂತ್ರಿ ಮಂಡಲದ ಮಹನೀಯರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ರಾಜ್ಯದ ಜನರ ಹಿತವನ್ನು ಕಾಪಾಡಲು ಮರೆತಿದ್ದಾರೆ ಎಂದು ಮಂಡ್ಯ ಮಾಜಿ ಸಂಸದ ಶಿವರಾಮೇಗೌಡ ಹೇಳಿದರು.

ನಾಗಮಂಗಲದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ನಡೆಸುವ ಸರ್ಕಾರ ಕೊರೊನಾ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲಗೊಂಡಿದೆ. ರಾಜ್ಯದ ಪ್ರತಿನಿಧಿಗಳು ಭ್ರಷ್ಟಾಚಾರವನ್ನು ತೊಡಗಿದ್ದಾರೆ. ರಾಜ್ಯದ ಜನತೆಯ ಹಿತವನ್ನು ಯಾವ ಮಟ್ಟದಲ್ಲಿ ನಿರ್ವಹಣೆ ಮಾಡುತ್ತಾರೆ ಎಂಬುದನ್ನು ಮುಂದಿನ ಜನಾದೇಶದಲ್ಲಿ ಜನತಾ ನ್ಯಾಯಾಲಯದಲ್ಲಿ ತೀರ್ಪು ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

ಮಂಡ್ಯದ ಸಕ್ಕರೆ ಕಾರ್ಖಾನೆ ಖಾಸಗೀಕರಣಕ್ಕೆ ಮಾಡಬಾರದೆಂಬುದು ಈಗಾಗಲೇ ಒತ್ತಾಯ ಮಾಡಲಾಗಿದೆ. ಮಂಡ್ಯ ಹಾಲು ಒಕ್ಕೂಟದ ಪ್ರಕರಣವನ್ನು ದೊಡ್ಡಮಟ್ಟದಲ್ಲಿ ತನಿಖೆ ಮಾಡಿ ತಪ್ಪಿತಸ್ಥರು ಯಾರೇ ಆದರೂ   ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು..

ಇದೇ ಸಂದರ್ಭದಲ್ಲಿ ಲಾರಿ ಚೆನ್ನಪ್ಪ. ವಕೀಲರಾದ .ಟಿ.ಕೆ. ರಾಮೇಗೌಡ, ಕೊಪ್ಪ ತಮ್ಮಯ್ಯ, ಚೇತು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು