5:52 PM Sunday14 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಮಂಡ್ಯ: ತ್ರಿವೇಣಿ ಸಂಗಮದಲ್ಲಿ ಬಾಗಿನ ಅರ್ಪಣೆ; ಮಲೆಮಹಾದೇಶ್ವರರ ಮಹಾಕುಂಭ ಮೇಳಕ್ಕೆ ಚಾಲನೆ

17/10/2022, 11:11

ಮಂಡ್ಯ(reporterkarnataka.com)
ಇಂದು ಮಂಡ್ಯ ಜಿಲ್ಲೆಯ ಕೆ. ಆರ್‌. ಪೇಟೆಯ ಅಂಬಿಗರಹಳ್ಳಿ, ಸಂಗಾಪುರ ಹಾಗೂ ಪುರ ಗ್ರಾಮಗಳ ಕಾವೇರಿ – ಹೇಮಾವತಿ – ಲಕ್ಷ್ಮಣ ತೀರ್ಥ ಪವಿತ್ರ ತ್ರಿವೇಣಿ ಸಂಗಮದಲ್ಲಿ ಬಾಗಿನ ಅರ್ಪಿಸಿ, ನಾಲ್ಕು ದಿನಗಳ ಐತಿಹಾಸಿಕ ಶ್ರೀ ಮಲೆಮಹಾದೇಶ್ವರರ ಮಹಾಕುಂಭಮೇಳದ ಉದ್ಘಾಟನೆ ಭಾನುವಾರ ನೆರವೇರಿಸಲಾಯಿತು.


ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಜಿ, ಉಸ್ತುವಾರಿ ಸಚಿವ
ಗೋಪಾಲಯ್ಯ ಜಿ, ನಾರಾಯಣ ಗೌಡ,ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಭಾಗವಹಿಸಿ ಮಾತನಾಡಿದರು.

ಸಮಾರಂಭದಲ್ಲಿ ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷರು ಸ್ವಾಮಿ ಮುಕ್ತಿದಾನಂದ ಜೀ ಮಹಾರಾಜ್, ಕಾಗಿನೆಲೆ ಕನಕಗುರು ಪೀಠ ಶ್ರೀ ಶಿವಾನಂದಪುರಿ ಸ್ವಾಮೀಜಿ, ಶ್ರೀ ಮಲೆ ಮಹದೇಶ್ವರ ಬೆಟ್ಟ ಸುಕ್ಷೇತ್ರ ಶ್ರೀ ಸಾಲೂರು ಬೃಹನ್ಮಠ ಪೀಠಾಧ್ಯಕ್ಷರು ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿದ್ದರು.

ಮಲೆ ಮಹಾದೇಶ್ವರರು ಶ್ರೀಶೈಲದಿಂದ ಬಂದಾಗ ಪಾದಸ್ಪರ್ಶ ಮಾಡಿದ್ದ ಪವಿತ್ರ ಸ್ಥಳದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಬಹಳ ವಿಶೇಷ. ಪೂಜ್ಯರ ನೇತೃತ್ವದಲ್ಲಿ ನಡೆಯುತ್ತಿರುವ ಇಂತಹ ಕಾರ್ಯಕ್ರಮಗಳ ಮೂಲಕ ನಮ್ಮ ಮೂಲ ಧಾರ್ಮಿಕ ಸಂಸ್ಕೃತಿಯನ್ನ ಜನ ಮಾನಸದಲ್ಲಿ ಬಿತ್ತಿ ಬೆಳೆಸುವ ಕಾರ್ಯ ನಡೆಸಲಾಗುತ್ತಿದೆ. ಸಂಸ್ಕೃತಿಯನ್ನು ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಧಾರ್ಮಿಕ ಕಾರಿಡಾರ್ ಗಳನ್ನು ಅಭಿವೃದ್ಧಿಗೊಳಿಸುವತ್ತ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಸರಕಾರವೂ ಚಿಂತನೆ ನಡೆಸಿದ್ದು, ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಚಿವ ಸಿ. ಎನ್. ಅಶ್ವತನಾರಾಯಣ ಜಿ, ಜಿಲ್ಲಾಧಿಕಾರಿಗಳಾದ ಎಸ್.ಅಶ್ವತಿ, ಜಿ.ಪಂ. ಸಿಇಒ ಶಾಂತ ಎಲ್. ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು