ಇತ್ತೀಚಿನ ಸುದ್ದಿ
ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು
10/07/2026, 14:41
ಮಂಡ್ಯ(reporterkarnataka.com): ಮಂಡ್ಯದ ಶ್ರೀರಂಗಪಟ್ಟಣದ ಮುಸ್ಲಿಂ ವಸತಿ ಶಾಲೆಯಲ್ಲಿ ಫೈಂಟ್ ಮಾಡುತ್ತಿದ್ದ ಕಾರ್ಮಿಕ ಕಟ್ಟಡದ ಮೇಲಿಂದ ಬಿದ್ದು ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ.
ಕೊಡಗಿನ ಕುಶಾಲನಗರ ಮೂಲದ ಸಂಜಯ್ ರೋಲಾಕ್ಸ್(47) ಮೃತ ಫೈಂಟರ್.
ಶಾಲೆಯ ಮೇಲಂತಸ್ತಿನ ಕಟ್ಟಡ ಫೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.












