11:50 AM Friday27 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

ಮನೆ ಕುಸಿತ ಪ್ರದೇಶಕ್ಕೆ ಜಿಪಂ ಸಿಇಒ ಭೇಟಿ: ಸಂತ್ರಸ್ತರ ಜತೆ ಸಭೆ; ವಸತಿರಹಿತರಿಗೆ 15 ದಿನಗಳಲ್ಲಿ ನಿವೇಶನ ಭರವಸೆ

20/07/2022, 21:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಾಳೂರು, ನಿಡುವಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಕುಸಿತ ಉಂಟಾದ ಪ್ರದೇಶಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಭೇಟಿ ನೀಡಿ   ಅಧಿಕಾರಿಗಳು ಹಾಗೂ ಸಂತ್ರಸ್ತರ ಜತೆ  ಸಭೆ ನಡೆಸಿದರು.

ಬಳಿಕ ಮಾತನಾಡಿದ ಅವರು, ನಿಡುವಾಳೆ, ಮರ್ಕಲ್, ಬಾಳೂರು ಮೂರು ಭಾಗಗಳಲ್ಲಿ ಮನೆ ಕುಸಿತವಾದ ಸಂತ್ರಸ್ತರಿಗೆ ಪರ್ಯಾಯ ಜಾಗ ಗುರುತಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು ಶೀಘ್ರವಾಗಿ ಜಾಗ ಅನುಮೋದಿಸಿ ನೀಡಲಾಗುವುದು. ಬಾಳೂರು ಗ್ರಾಪಂ ಕಲ್ಲಕ್ಕಿ ಭಾಗದಲ್ಲಿ ವಸತಿ ರಹಿತರಿಗೆ ನೂತನವಾಗಿ ಸೂಚಿಸಿರುವ ಜಾಗವನ್ನು 15 ದಿನಗಳ ಅವಧಿಯಲ್ಲಿ ಅನುಮೋದಿಸಿ ಸಂತ್ರಸ್ತರಿಗೆ ವಿತರಿಸುವುದಾಗಿ ಭರವಸೆ ನೀಡಿದರು. 

ಮನೆ ಬಿದ್ದು ಹೋದ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಆದೇಶ ನೀಡಲಾಗಿದ್ದು, ಬಹುತೇಕ ಮನೆಗಳಿಗೆ ಪರಿಹಾರ ವಿತರಿಸಲಾಗಿದೆ. ಪರಿಹಾರ ಸಿಗದ ಸಂತ್ರಸ್ತರಿದ್ದರೆ ಹಾಗೂ ವಿವಿಧ ಕಡೆಗಳಲ್ಲಿ ಅಂಗನವಾಡಿ, ರಸ್ತೆ,ತಡೆಗೋಡೆ ಮಳೆಗೆ  ಕುಸಿದು ಹೋಗಿದ್ದಲ್ಲಿ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು.

ಗ್ರಾಮೀಣ ಭಾಗದಲ್ಲಿ ಆಸ್ಪತ್ರೆಯ ವೈದ್ಯರ, ಸಿಬ್ಬಂದಿಗಳ ಕೊರತೆ ಎದ್ದು ಕಾಣುತ್ತಿದ್ದು ಕೂಡಲೇ ಸಿಬ್ಬಂದಿಗಳನ್ನು ಗ್ರಾಮೀಣ ಭಾಗದ ಆಸ್ಪತ್ರೆಗಳಿಗೆ ನಿಯೋಜಿಸಲು  ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಚಿಂತನೆ ನಡೆಸಲಾಗುವುದು’ ಎಂದರು. 

ಜಿಲ್ಲೆಯ ವಿವಿಧ ಭಾಗಗಳಲ್ಲಿ ಶಾಲೆ, ಅಂಗನವಾಡಿಗಳನ್ನು ಅಚ್ಚುಕಟ್ಟಾಗಿ ಗ್ರಾಮ ಪಂಚಾಯಿತಿ ಹಾಗೂ ಸಂಘ ಸಂಸ್ಥೆಗಳ ವತಿಯಿಂದ ಇಡಲಾಗಿದೆ. ಮರ್ಕಲ್ ಅಂಗನವಾಡಿ ಕೇಂದ್ರದ ನಿರ್ವಹಣೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು