ಇತ್ತೀಚಿನ ಸುದ್ದಿ
ಮಂಗಳಾ ಕ್ರೀಡಾಂಗಣದಲ್ಲಿ 1 ಕೋಟಿ ವೆಚ್ಚದಲ್ಲಿ ವಾಕಿಂಗ್ ಟ್ರ್ಯಾಕ್: ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ
25/02/2022, 21:26
ಮಂಗಳೂರು(reporterkarnataka.com): ಮಂಗಳಾ ಕ್ರೀಡಾಂಗಣದಲ್ಲಿ 1 ಕೋಟಿ ವೆಚ್ಚದಲ್ಲಿ ವಾಕಿಂಗ್ ಟ್ರ್ಯಾಕ್ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಮಂಗಳಾ ಕ್ರೀಡಾಂಗಣದಲ್ಲಿ ಸಾರ್ವಜನಿಕರ ಬಹುಕಾಲದ ಬೇಡಿಕೆಯಾಗಿದ್ದ ವಾಕಿಂಗ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದೇವೆ. ಈ ಭಾಗದಲ್ಲಿ ಸಾರ್ವಜನಿಕರಿಗೆ ಅದರಲ್ಲೂ ಪ್ರಮುಖವಾಗಿ ಹಿರಿಯ ನಾಗರಿಕರಿಗೆ ಮುಂಜಾನೆ ಹಾಗೂ ಸಂಜೆಯ ವೇಳೆಗೆ ವಾಕಿಂಗ್ ಮಾಡಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಾಕಿಂಗ್ ಟ್ರ್ಯಾಕ್ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದರು.
1 ಕೋಟಿ ಅನುದಾನದಲ್ಲಿ ವಾಕಿಂಗ್ ಟ್ರ್ಯಾಕ್ ಜೊತೆಗೆ ಮಂಗಳ ಕ್ರೀಡಾಂಗಣದಲ್ಲಿ ಬೆಳಕಿನ ವ್ಯವಸ್ಥೆ ಹಾಗೂ ವಾಲಿಬಾಲ್ ಕೋರ್ಟಿನಲ್ಲಿ ಅಭಿವೃದ್ಧಿಯನ್ನು ಕೂಡ ಕೈಗೆತ್ತಿಕೊಂಡಿದ್ದೇವೆ. ವಾಕಿಂಗ್ ಟ್ರ್ಯಾಕ್ ನಿರ್ಮಾಣದ ಸಂದರ್ಭದಲ್ಲಿ ಚರಂಡಿ ನಿರ್ಮಿಸಿ ಮಳೆ ನೀರು ಹರಿದು ಹೋಗಲು ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರ ಬೇಡಿಕೆಯನ್ನು ಈಡೇರಿಸಲು ನಮ್ಮ ಆಡಳಿತ ಬದ್ಧವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮಹಾಪೌರರಾದ ಸುಮಂಗಲ ರಾವ್, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಳೀಯ ಕಾರ್ಪೋರೇಟರ್ ಸಂಧ್ಯಾ ಮೋಹನ್ ಆಚಾರ್, ಪಾಲಿಕೆ ಸದಸ್ಯರಾದ ಕಿಶೋರ್ ಕೊಟ್ಟಾರಿ, ಕದ್ರಿ ಮನೋಹರ್ ಶೆಟ್ಟಿ, ಗಣೇಶ್ ಕುಲಾಲ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾಂಗಣ ಸಮಿತಿ ಸದಸ್ಯರಾದ ಪುರುಷೋತ್ತಮ ಪೂಜಾರಿ, ಕೃಷ್ಣ ಶೆಣೈ, ಸಂಧ್ಯಾ ವೆಂಕಟೇಶ್, ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರಾದ ಪ್ರದೀಪ್ ಡಿ.ಸೋಜ, ಹಿರಿಯ ವಾಲಿಬಾಲ್ ತರಬೇತುದಾರರಾದ ನಾರಾಯಣ ಆಳ್ವ, ಹಿರಿಯ ವಾಲಿಬಾಲ್ ಕ್ರೀಡಾಪಟು ಭಗವಾನ್ ದಾಸ್, ಬಿಜೆಪಿ ಮುಖಂಡರು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.