12:54 AM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮಂಗಳಾ ಕ್ರೀಡಾಂಗಣದಲ್ಲಿ 1 ಕೋಟಿ ವೆಚ್ಚದಲ್ಲಿ ವಾಕಿಂಗ್ ಟ್ರ್ಯಾಕ್: ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ

25/02/2022, 21:26

ಮಂಗಳೂರು(reporterkarnataka.com): ಮಂಗಳಾ ಕ್ರೀಡಾಂಗಣದಲ್ಲಿ 1 ಕೋಟಿ ವೆಚ್ಚದಲ್ಲಿ ವಾಕಿಂಗ್ ಟ್ರ್ಯಾಕ್ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. 

ನಂತರ ಮಾತನಾಡಿದ ಅವರು, ಮಂಗಳಾ ಕ್ರೀಡಾಂಗಣದಲ್ಲಿ ಸಾರ್ವಜನಿಕರ ಬಹುಕಾಲದ ಬೇಡಿಕೆಯಾಗಿದ್ದ ವಾಕಿಂಗ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದೇವೆ. ಈ ಭಾಗದಲ್ಲಿ ಸಾರ್ವಜನಿಕರಿಗೆ ಅದರಲ್ಲೂ ಪ್ರಮುಖವಾಗಿ ಹಿರಿಯ ನಾಗರಿಕರಿಗೆ  ಮುಂಜಾನೆ ಹಾಗೂ ಸಂಜೆಯ ವೇಳೆಗೆ ವಾಕಿಂಗ್ ಮಾಡಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಾಕಿಂಗ್ ಟ್ರ್ಯಾಕ್ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದರು. 

1 ಕೋಟಿ ಅನುದಾನದಲ್ಲಿ ವಾಕಿಂಗ್ ಟ್ರ್ಯಾಕ್ ಜೊತೆಗೆ ಮಂಗಳ ಕ್ರೀಡಾಂಗಣದಲ್ಲಿ ಬೆಳಕಿನ ವ್ಯವಸ್ಥೆ ಹಾಗೂ ವಾಲಿಬಾಲ್ ಕೋರ್ಟಿನಲ್ಲಿ ಅಭಿವೃದ್ಧಿಯನ್ನು ಕೂಡ ಕೈಗೆತ್ತಿಕೊಂಡಿದ್ದೇವೆ. ವಾಕಿಂಗ್ ಟ್ರ್ಯಾಕ್ ನಿರ್ಮಾಣದ ಸಂದರ್ಭದಲ್ಲಿ ಚರಂಡಿ ನಿರ್ಮಿಸಿ ಮಳೆ ನೀರು ಹರಿದು ಹೋಗಲು ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರ ಬೇಡಿಕೆಯನ್ನು ಈಡೇರಿಸಲು ನಮ್ಮ ಆಡಳಿತ ಬದ್ಧವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮಹಾಪೌರರಾದ ಸುಮಂಗಲ ರಾವ್, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಳೀಯ ಕಾರ್ಪೋರೇಟರ್ ಸಂಧ್ಯಾ ಮೋಹನ್ ಆಚಾರ್, ಪಾಲಿಕೆ ಸದಸ್ಯರಾದ ಕಿಶೋರ್ ಕೊಟ್ಟಾರಿ, ಕದ್ರಿ ಮನೋಹರ್ ಶೆಟ್ಟಿ, ಗಣೇಶ್ ಕುಲಾಲ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾಂಗಣ ಸಮಿತಿ ಸದಸ್ಯರಾದ ಪುರುಷೋತ್ತಮ ಪೂಜಾರಿ, ಕೃಷ್ಣ ಶೆಣೈ, ಸಂಧ್ಯಾ ವೆಂಕಟೇಶ್, ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರಾದ ಪ್ರದೀಪ್ ಡಿ.ಸೋಜ, ಹಿರಿಯ ವಾಲಿಬಾಲ್ ತರಬೇತುದಾರರಾದ ನಾರಾಯಣ ಆಳ್ವ, ಹಿರಿಯ ವಾಲಿಬಾಲ್ ಕ್ರೀಡಾಪಟು ಭಗವಾನ್ ದಾಸ್, ಬಿಜೆಪಿ ಮುಖಂಡರು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು