ಇತ್ತೀಚಿನ ಸುದ್ದಿ
ಮಂಗಳೂರು ವಿಮಾನ ನಿಲ್ದಾಣ ಭೂಸ್ವಾಧೀನ | ಗರಿಷ್ಠ ಪರಿಹಾರ: ರಾಜ್ಯ ಸರಕಾರಕ್ಕೆ ಪದ್ಮರಾಜ್ ಆರ್. ಪೂಜಾರಿ ಅಭಿನಂದನೆ
02/09/2025, 21:39

ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟೀಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರವು (MIAGL) ಕಳೆದ ಹತ್ತು ವರ್ಷಗಳಲ್ಲಿ ಎಂದೂ ಪಾವತಿಸದಿದ್ದಷ್ಟು ಮೊತ್ತವನ್ನು ಪಾವತಿಸುವಂತೆ ಮಾಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಗಾಗಿ 32.97 ಎಕರೆ ಜಾಗ ಸ್ವಾಧೀನಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪ್ರಸ್ತಾವನೆಗೆ ಪ್ರಕಾರ ಜಾಗ ಕಳೆದುಕೊಳ್ಳುವವರಿಗೆ ಗರಿಷ್ಠ ಪರಿಹಾರ ನೀಡುವಂತೆ ನಾನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಹಾಗು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ರವರ ಗಮನ ಸೆಳೆದಿದ್ದೆ. ಜತೆಗೆ ಈ ಬಗ್ಗೆ ಸ್ಪೀಕರ್ ಯು.ಟಿ.ಖಾದರ್, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಅಶೋಕ್ವ ರೈ ವಿಧಾನಪರಿಷತ್ ಸದ್ಯರಾದ ಐವನ್ ಡಿಸೋಜ, ಮಂಜನಾಥ ಭಂಡಾರಿಯವರು ನಿರಂತರವಾಗಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರ (Airport Authority) ಮಂಗಳೂರು ವಿಮಾನ ನಿಲ್ದಾಣ ಖಾಸಗಿ ಒಡೆತನದಲ್ಲಿದ್ದರೂ, ರಾಜ್ಯ ಸರ್ಕಾರಕ್ಕೆ ಮೊದಲ ಬಾರಿಗೆ ಹಣ ಪಾವತಿಸಲು ಒಪ್ಪಿದೆ. ಕಾಂಗ್ರೆಸ್ ನೇತೃತ್ವದ ಸರ್ಕಾರವು ಎಲ್ಲಾ ಫಲಾನುಭವಿಗಳಿಗೆ ಸಹಾಯ ಮಾಡಲು ಪಾರದರ್ಶಕ ರೀತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಸಲಿದೆ. ಈ ಹಿಂದೆ ಕೇಂದ್ರ ಸರ್ಕಾರ ಭೂಮಿ ಉಚಿತವಾಗಿ ನೀಡಬೇಕೆಂದು ಒತ್ತಾಯಿಸಿತ್ತು. ಆದರೆ ಸ್ಥಳೀಯ ಭೂಮಾಲೀಕರಿಗೆ ಪರಿಹಾರ ಸಿಗಲೇಬೇಕೆಂದು ರಾಜ್ಯ ಸರ್ಕಾರವು ದೃಢವಾಗಿ ನಿಂತು ಯಶಸ್ವಿಯಾಗಿದೆ. ಜನಪರ ಕಾಳಜಿಯ ಹೊಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಎಂದಿಗೂ ಜನತೆಯ ಪರವಾಗಿದೆ ಎನ್ನುವುದಕ್ಕೆ ಇದು ಒಂದು ನಿದರ್ಶನ ಎಂದು ಅವರು ತಿಳಿಸಿದ್ದಾರೆ.