4:00 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಂಗಳೂರು ಏರ್ ಪೋರ್ಟ್: ಗುಡುಗು ಮಳೆಗೆ ಲ್ಯಾಂಡ್ ಆಗದೆ ವಾಪಸ್ ಹೋದ 3 ವಿಮಾನಗಳ ಪೈಕಿ ಮತ್ತೆ ಹಿಂತಿರುಗಿದ 2 ಫ್ಲೈಟ್

13/03/2025, 20:32

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು
.

info.reporterkarnataka@gmail.com

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಸುರಿದ ಗುಡುಗು ಸಹಿತ ಮಳೆಯ ಪರಿಣಾಮ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೆ 3 ವಿಮಾನಗಳು ವಾಪಸ್ ಹೋಗಿವೆ. ಅದರಲ್ಲಿ ಎರಡು ವಿಮಾನಗಳು ಮತ್ತೆ ಆಗಮಿಸಿ ಸುರಕ್ಷಿತವಾಗಿ ಲ್ಯಾಂಡ್ ಆಗಿವೆ.
ವಿಮಾನ ನಿಲ್ದಾಣವಿರುವ ಬಜಪೆ ಪ್ರದೇಶದಲ್ಲಿ ದಟ್ಟ ಮೋಡ ಹಾಗೂ ಗುಡುಗು ಸಹಿತ ಮಳೆಯಾದ ಪರಿಣಾಮ ಹೈದರಾಬಾದ್ ನಿಂದ
ಮಂಗಳೂರಿಗೆ ಆಗಮಿಸಿದ ವಿಮಾನ ಇಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೆ ಹೈದರಾಬಾದ್ ಗೆ ವಾಪಸ್ ಹೋಗಿತ್ತು. ಅದರೆ, ಅದು ಮತ್ತೆ ವಾಪಸ್ ಆಗಮಿಸಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಎರಡು ವಿಮಾನಗಳು ಲ್ಯಾಂಡ್ ಆಗಲು ಸಾಧ್ಯವಾಗದೆ ನೆರೆಯ ಕೇರಳ ರಾಜ್ಯದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿವೆ. ಅದರಲ್ಲಿ ಒಂದು ವಿಮಾನ ಮತ್ತೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬುಧವಾರ ಸಂಜೆ ದಿಢೀರ್ ಮಳೆಯಾಗಿದೆ. ಕಳೆದ ಒಂದು ವಾರದಿಂದ ಜಿಲ್ಲೆಯ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರಿದ ಪರಿಣಾಮ ದಿಢೀರ್ ಮಳೆಯಾಗಿದೆ. ಬೆಳ್ತಂಗಡಿಯಲ್ಲಿ ಆಲಿಕಲ್ಲಿನ ಸುರಿಮಳೆಯಾಗಿತ್ತು. ಮಂಗಳೂರಿನ ಬಜಪೆ, ಕಿನ್ನಿಪದವು ಬಳಿ ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ಬಂಟ್ವಾಳದಲ್ಲಿ ಹಲವು ಮರಗಳು, ವಿದ್ಯುತ್‌ ಕಂಬಗಳು ಧರೆಗೆ ಉರುಳಿವೆ. ಸುಳ್ಯ, ಕಡಬ ಭಾಗದಲ್ಲಿ ಮಳೆಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು