3:14 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರು ಕುಕ್ಕರ್ ಬಾಂಬ್ ಕೇಸ್: ಆರೋಪಿಯಿಂದ ತಪ್ಪೊಪ್ಪಿಗೆ, ಏ.25ಕ್ಕೆ ತೀರ್ಪು

18/04/2026, 22:05

ಮಂಗಳೂರು(reporterkarnataka.com): ನಾಲ್ಕು ವರ್ಷಗಳ ಹಿಂದೆ ಮಂಗಳೂರಿನ ಹೊರವಲಯದಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಈ ಸಂಬಂಧ ಎನ್‌ಐಎ ವಿಶೇಷ ನ್ಯಾಯಾಲಯ ಅಂತಿಮ ತೀರ್ಪನ್ನು ಏಪ್ರಿಲ್ 25ಕ್ಕೆ ಕಾಯ್ದಿರಿಸಿದೆ.
ಶಾರೀಕ್ ಕಳೆದ ಡಿಸೆಂಬರ್‌ನಲ್ಲಿ ತಪ್ಪೊಪ್ಪಿಗೆ ಅರ್ಜಿ ಸಲ್ಲಿಸಿದ್ದನು. ಮೂರು ತಿಂಗಳ ವಿಚಾರಣೆ ಬಳಿಕ ನ್ಯಾಯಾಲಯ ಆ ಅರ್ಜಿಯನ್ನು ಮಾನ್ಯಗೊಳಿಸಿತು. ಬಳಿಕ ವಾದ-ಪ್ರತಿವಾದಗಳು ನಡೆದಿದ್ದು, ಗುರುವಾರ ನಡೆದ ವಿಚಾರಣೆಯಲ್ಲಿ ತಾಂತ್ರಿಕ ಕಾರಣಗಳಿಂದ ಅಂತಿಮ ತೀರ್ಪನ್ನು ಏಪ್ರಿಲ್ 25ಕ್ಕೆ ಮುಂದೂಡಲಾಗಿದೆ.
ಈ ಪ್ರಕರಣದಲ್ಲಿ 2024ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶಾರೀಕ್ ಮತ್ತು ಸೈಯದ್ ಯಾಸೀನ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ವಿಚಾರಣೆ ವೇಳೆ ಆರಂಭದಲ್ಲಿ ಶಾರೀಕ್ ತನ್ನ ನಿರಪರಾಧಿತ್ವವನ್ನು ವಾದಿಸಿದ್ದರೂ, ಬಳಿಕ 2025ರ ಡಿಸೆಂಬರ್‌ನಲ್ಲಿ ಸಲ್ಲಿಸಿದ ಅರ್ಜಿಯಲ್ಲಿ ತನ್ನ ಮೇಲಿನ ಆರೋಪಗಳು ಸತ್ಯವೆಂದು ಒಪ್ಪಿಕೊಂಡಿದ್ದಾನೆ.
ಅರ್ಜಿಯಲ್ಲಿ, “ಕುಕ್ಕರ್‌ನಲ್ಲಿ ಸುಧಾರಿತ ಸ್ಪೋಟಕ ಸಾಧನ (ಐಇಡಿ) ಇಟ್ಟು ಸ್ಫೋಟಕ್ಕೆ ಕಾರಣನಾಗಿದ್ದೇನೆ. ಈಗ ಪಶ್ಚಾತ್ತಾಪವಾಗಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು” ಎಂದು ಉಲ್ಲೇಖಿಸಿದ್ದಾನೆ. ಮೂರು ತಿಂಗಳ ಬಳಿಕ ನ್ಯಾಯಾಲಯವು ಈ ತಪ್ಪೊಪ್ಪಿಗೆ ಅರ್ಜಿಯನ್ನು ಅಂಗೀಕರಿಸಿದೆ.

*ಪ್ರಕರಣದ ಹಿನ್ನೆಲೆ:*
2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟೋದಲ್ಲಿ ಸಾಗುತ್ತಿದ್ದ ವೇಳೆ ಕುಕ್ಕರ್‌ನಲ್ಲಿದ್ದ ಐಇಡಿ ಸ್ಫೋಟಗೊಂಡಿತ್ತು. ಸ್ಫೋಟದಲ್ಲಿ ಶಾರೀಕ್ ಹಾಗೂ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶಾರೀಕ್‌ನ್ನು ಬಂಧಿಸಿದ್ದರು.
ಪ್ರಾಥಮಿಕ ತನಿಖೆಯಲ್ಲಿ ಈ ಕೃತ್ಯದ ಹಿಂದೆ ಐಸಿಸ್ ಸಂಪರ್ಕ ಇರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿ ಎನ್‌ಐಎ ತನಿಖೆ ಕೈಗೊಂಡಿತ್ತು.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಶಾರೀಕ್, ಉಗ್ರ ಸಂಘಟನೆಗಳಿಂದ ಪ್ರೇರಿತನಾಗಿದ್ದು, ಹಿಂದೆಯೂ ಮಂಗಳೂರು ಗೋಡೆ ಬರಹ ಹಾಗೂ ಶಿವಮೊಗ್ಗ ತುಂಗಾ ನದಿ ತೀರದಲ್ಲಿ ನಡೆದ ಸ್ಫೋಟ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ.
ಇದಲ್ಲದೆ, ದಕ್ಷಿಣ ಭಾರತದ ದೇವಾಲಯಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಸ್ಫೋಟಗೊಳಿಸುವ ಸಂಚು ರೂಪಿಸಲಾಗಿತ್ತು ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಕುಕ್ಕರ್‌ನಲ್ಲಿ ಐಇಡಿ ಇಟ್ಟು ಟೈಮರ್ ಅಳವಡಿಸಲಾಗಿದ್ದು, 90 ನಿಮಿಷಗಳ ಬದಲು ತಪ್ಪಾಗಿ 9 ನಿಮಿಷಕ್ಕೆ ಸೆಟ್ ಮಾಡಿದ್ದರಿಂದ ಮಾರ್ಗ ಮಧ್ಯೆಯೇ ಸ್ಫೋಟ ಸಂಭವಿಸಿದೆ.
ಪ್ರಕರಣದ ಎರಡನೇ ಆರೋಪಿ ಸೈಯದ್ ಯಾಸೀನ್‌ನ್ನು ಬಾಂಬ್ ತಯಾರಿಕೆಗೆ ಅಗತ್ಯ ಸಾಮಗ್ರಿ ಪೂರೈಸಿದ ಆರೋಪದಡಿ ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು