6:47 PM Sunday14 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಹರಿದು ಬಂದ ಭಕ್ತಸಾಗರ; ಶಾರದೆ, ನವದುರ್ಗೆಯರ ದರ್ಶನ

14/10/2021, 18:54

ಮಂಗಳೂರು(reporterkarnataka.com): ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರತಿ ವರ್ಷ ನಡೆಯುವ ನವರಾತ್ರಿ ಉತ್ಸವದ ಆಯುಧ ಪೂಜೆಯ ದಿನವಾದ ಇಂದು ಕುದ್ರೋಳಿ ದೇಗುಲದಲ್ಲಿ ಭಕ್ತಜನರ ದಟ್ಟಣೆ ವಿಪರೀತವಾಗಿತ್ತು. ಸರಕಾರಿ ರಜೆ ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ಬೃಹತ್ ಜನಸಾಗರವೇ ನೆರೆದಿತ್ತು.

ಕುದ್ರೋಳಿ ದೇಗುಲಕ್ಕೆ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದರು. ಸಿಎಂ ಅವರು ಸಂಜೆ 5 ಗಂಟೆಗೆ ಭೇಟಿ ನೀಡುವುದರಿಂದ ಭದ್ರತಾ ಕಾರಣಗಳಿಗಾಗಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ ವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಆಯುಧ ಪೂಜೆಯ ದಿನವಾದ ಇಂದು ಯಾವುದೇ ವಿವಿಐಪಿಗಳು ಇಲ್ಲದ ಕಾರಣ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಾರದೆ ಹಾಗೂ ನವದುರ್ಗೆಯರನ್ನು ಕಣ್ತುಂಬಿಸಿಕೊಂಡರು. 

ಇಂದು ಬೆಳಗ್ಗಿನಿಂದಲೇ ಭಾರಿ ಸಂಖ್ಯೆಯಲ್ಲಿ ಭಕ್ತರು ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಶಾರದೆ, ನವದುರ್ಗೆ ಹಾಗೂ ವಿಘ್ನನಿವಾರಕನ ಕಂಡು ಪುನೀತರಾದರು.

ಮಂಗಳೂರು ದಸರಾ ಮಹೋತ್ಸವ ನವದುರ್ಗೆ, ಶಾರದೆ ಹಾಗೂ ಗಣಪತಿಯನ್ನು ಪ್ರತಿಷ್ಠಾಪಿಸುವ ಮೂಲಕ ಕಳೆದ ಗುರುವಾರ

ಆರಂಭವಾಯಿತು. ಗುರುವಾರ ಬೆಳಗ್ಗೆ  9 ಗಂಟೆಗೆ ಗುರುಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಮುನ್ನುಡಿ ಬರೆಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು