4:29 PM Thursday26 - November 2026
ಬ್ರೇಕಿಂಗ್ ನ್ಯೂಸ್
ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಹೊಸ ಹೆಸರು!: ಮರು ನಾಮಕರಣಕ್ಕೆ ಅದೊಂದೇ ಕಾರಣ! ಮೇಕೆದಾಟು ಯೋಜನೆ : ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಹರಿದು ಬಂದ ಭಕ್ತಸಾಗರ; ಶಾರದೆ, ನವದುರ್ಗೆಯರ ದರ್ಶನ

14/10/2021, 18:54

ಮಂಗಳೂರು(reporterkarnataka.com): ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರತಿ ವರ್ಷ ನಡೆಯುವ ನವರಾತ್ರಿ ಉತ್ಸವದ ಆಯುಧ ಪೂಜೆಯ ದಿನವಾದ ಇಂದು ಕುದ್ರೋಳಿ ದೇಗುಲದಲ್ಲಿ ಭಕ್ತಜನರ ದಟ್ಟಣೆ ವಿಪರೀತವಾಗಿತ್ತು. ಸರಕಾರಿ ರಜೆ ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ಬೃಹತ್ ಜನಸಾಗರವೇ ನೆರೆದಿತ್ತು.

ಕುದ್ರೋಳಿ ದೇಗುಲಕ್ಕೆ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದರು. ಸಿಎಂ ಅವರು ಸಂಜೆ 5 ಗಂಟೆಗೆ ಭೇಟಿ ನೀಡುವುದರಿಂದ ಭದ್ರತಾ ಕಾರಣಗಳಿಗಾಗಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ ವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಆಯುಧ ಪೂಜೆಯ ದಿನವಾದ ಇಂದು ಯಾವುದೇ ವಿವಿಐಪಿಗಳು ಇಲ್ಲದ ಕಾರಣ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಾರದೆ ಹಾಗೂ ನವದುರ್ಗೆಯರನ್ನು ಕಣ್ತುಂಬಿಸಿಕೊಂಡರು. 

ಇಂದು ಬೆಳಗ್ಗಿನಿಂದಲೇ ಭಾರಿ ಸಂಖ್ಯೆಯಲ್ಲಿ ಭಕ್ತರು ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಶಾರದೆ, ನವದುರ್ಗೆ ಹಾಗೂ ವಿಘ್ನನಿವಾರಕನ ಕಂಡು ಪುನೀತರಾದರು.

ಮಂಗಳೂರು ದಸರಾ ಮಹೋತ್ಸವ ನವದುರ್ಗೆ, ಶಾರದೆ ಹಾಗೂ ಗಣಪತಿಯನ್ನು ಪ್ರತಿಷ್ಠಾಪಿಸುವ ಮೂಲಕ ಕಳೆದ ಗುರುವಾರ

ಆರಂಭವಾಯಿತು. ಗುರುವಾರ ಬೆಳಗ್ಗೆ  9 ಗಂಟೆಗೆ ಗುರುಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಮುನ್ನುಡಿ ಬರೆಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು