5:41 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮಂಗಳೂರು ಮೀನುಗಾರಿಕಾ ಕಾಲೇಜು ವಿಶ್ವವಿದ್ಯಾನಿಲಯ‌ ಆಗುವ ಎಲ್ಲ ಅರ್ಹತೆ ಹೊಂದಿದೆ: ಸಚಿವ ಮಂಕಾಳ ಎಸ್. ವೈದ್ಯ

28/07/2024, 16:42

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಮಂಗಳೂರಿನ ಮೀನುಗಾರಿಕಾ ಕಾಲೇಜು ವಿಶ್ವವಿದ್ಯಾನಿಲಯದ ಎಲ್ಲ ಅರ್ಹತೆಯನ್ನು ಹೊಂದಿದೆ. 65 ಎಕರೆ ಜಾಗ ಕೂಡ ಇದೆ ಎಂದು ಬಂದರು, ಮೀನುಗಾರಿಕೆ, ಒಳನಾಡು ಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.
ನಗರದ ಎಕ್ಕೂರಿನಲ್ಲಿರುವ ಮೀನುಗಾರಿಕೆ ಕಾಲೇಜಿನಲ್ಲಿ ಆಯೋಜಿಸಿದ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ ‘ಬಿಗ್ ಫಿಶ್: 2.0‘ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಂಗಳೂರಿನಲ್ಲಿರುವ ದೇಶದ ಪ್ರಥಮ ಮೀನುಗಾರಿಕಾ ಕಾಲೇಜನ್ನು ವಿಶ್ವವಿದ್ಯಾನಿಲಯವಾಗಿಸುವ ನಿಟ್ಟಿನಲ್ಲಿ ಪೂರಕ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಬೇರೆ ರಾಜ್ಯಗಳಿಗೆ ನಮ್ಮ ಕಾಲೇಜು ಮಾದರಿಯಾಗಿದ್ದು, ಇಲ್ಲಿ ಕಲಿತವರು ತಮ್ಮ ರಾಜ್ಯಗಳಿಗೆ ತೆರಳಿ ಹೊಸ ಕಾಲೇಜು, ವಿಶ್ವವಿದ್ಯಾಲಯಗಳನ್ನು ರಚಿಸಲು ಸಾಧ್ಯವಾಗಿದ್ದರೂ ರಾಜ್ಯದಲ್ಲಿ ಈ ಪ್ರಯತ್ನದಲ್ಲಿ ನಾವು ಹಿಂದುಳಿದಿದ್ದೇವೆ. ಒಂದು ಕಾಲೇಜಿನಿಂದ ವಿಶ್ವವಿದ್ಯಾಲಯವನ್ನಾಗಿಸಲು ಸಾಧ್ಯವಿಲ್ಲ ಎಂಬ ತಾಂತ್ರಿಕ ಕಾರಣದ ಹಿನ್ನೆಲೆಯಲ್ಲಿ ಮಂಕಿಯಲ್ಲಿ ತರಬೇತಿ ಕೇಂದ್ರ, ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮೀನು ಮರಿ ಉತ್ಪಾದನಾ ಕೇಂದ್ರವನ್ನು ಮೇಲ್ದರ್ಜೆಗೇರಿಸುವುದು ಹಾಗೂ ಮೀನುಗಾರಿಕಾ ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ನಾಲ್ಕು ಶಾಖೆಗಳನ್ನು ಆರಂಭಿಸಲು ಕ್ರಮ ವಹಿಸಲಾಗಿದೆ. ಮಂಕಿಯಲ್ಲಿ ತರಬೇತಿ ಕೇಂದ್ರ ಸ್ಥಾಪನೆಗೆ ಸಂಬಂಧಿಸಿ ಈಗಾಗಲೇ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ ಎಂದು ಅವರು ಹೇಳಿದರು.


ಮೀನುಗಾರರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ 1.50 ಲಕ್ಷ ಲೀಟರ್ ಡೀಸೆಲ್ ವಿತರಣೆಯನ್ನು 2 ಲಕ್ಷ ಲೀಟರಿಗೆ ಏರಿಸಲಾಗಿದೆ. ಹಾಗಾಗಿ ಕಳೆದ ಸಾಲಿನ ಮೀನುಗಾರಿಕಾ ಅವಧಿಯಲ್ಲಿ ಡೀಸೆಲ್ ಬಂದಿಲ್ಲ ಎಂಬ ದೂರು ಮೂರು ಜಿಲ್ಲೆಗಳಿಂದಲೂ ಬಂದಿಲ್ಲ. ಈ ಸಬ್ಸಿಡಿಗಾಗಿ ಸರಕಾರ 285 ಕೋಟಿ ರೂ. ವೆಚ್ಚ ಮಾಡುತ್ತಿದೆ. ಸೀಮೆಎಣ್ಣೆ ಸಮಸ್ಯೆ ಆಗದಂತೆಯೂ ಕ್ರಮ ವಹಿಸಲಾಗಿದೆ ಎಂದರು.
ಆಳ ಸಮುದ್ರ ಮೀನುಗಾರಿಕೆ ರಜೆಯನ್ನು 60 ದಿನಗಳಿಂದ 90 ಕ್ಕೆ ವಿಸ್ತರಣೆ, ಬೋಟಿನಲ್ಲಿ ಬಳಸಬೇಕಾದ ಇಂಜಿನ್ ಸಾಮರ್ಥ್ಯ, ಬೆಳಕು ಮೀನುಗಾರಿಕೆ ಮತ್ತು ಬುಲ್ ಟ್ರಾಲಿಂಗ್ ನಿಷೇಧ ಸಹಿತ ಪ್ರಮುಖ ವಿಷಯಗಳಿಗೆ ಸಂಬಂಧಿಸಿ ದೇಶಕ್ಕೆ ಏಕರೂಪ ಕಾನೂನಿನ ಅಗತ್ಯವಿದೆ. ಈ ವಿಷಯದಲ್ಲಿ ರಾಜ್ಯಕ್ಕೆ ಪ್ರತ್ಯೇಕ ಕಾನೂನು ಆದಾಗ ಸಮಸ್ಯೆಗಳನ್ನು ಸರಿಪಡಿಸಲು ಅಸಾಧ್ಯ ಎಂಬುದು ನನ್ನ ಬಲವಾದ ನಿಲುವಾಗಿದ್ದು, ರಾಜ್ಯಕ್ಕೆ ಸೀಮಿತವಾದ ನಿಯಮಗಳಿಗೆ ನನ್ನ ವಿರೋಧವಿದೆ. ಗುಜರಾತ್ ಹೊರತುಪಡಿಸಿ ಕರ್ನಾಟಕ 320 ಕಿ.ಮೀ. ಉದ್ದದ ಕಡಲನ್ನು ಹೊಂದಿರುವುದರಿಂದ ದೇಶದಲ್ಲಿ ಏಕರೂಪದ ಕಾನೂನು ಆದಾಗ ಮಾತ್ರವೇ ಮೀನುಗಾರರ ಸಮಸ್ಯೆಗಳಿಗೆ ಪರಿಹಾರ ಸಾಧ್ಯ ಎಂದು ಅವರು ನುಡಿದರು.
ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದರು. ಶಾಸಕರಾದ ಡಾ.ಭರತ್ ಶೆಟ್ಟಿ ವೈ, ಐವನ್ ಡಿಸೋಜ, ಮೇಯರ್ ಸುಧೀರ್ ಶೆಟ್ಟಿ, ಸ್ಥಳೀಯ ಕಾರ್ಪೊರೇಟರ್ ಭರತ್ ಕುಮಾರ್, ಬೀದರ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಸಿ.ವೀರಣ್ಣ, ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ್ ಕುಮಾರ್ ಕಳ್ಳೇರ್, ಕೊಚ್ಚಿನ್ ಕೇರಳ ಮೀನುಗಾರಿಕೆ ಮತ್ತು ಸಾಗರ ಅಧ್ಯಯನ ವಿವಿ ಕುಲಸಚಿವ ಡಾ.ದಿನೇಶ್ ಕೈಲ್ಲಿ, ಯಶಸ್ವಿ ಕಡಲ ಉತ್ಪನ್ನಗಳ ಕಂಪನಿ ಆಡಳಿತ ಪಾಲುದಾರ ಉದಯ ಸಾಲಿಯಾನ್, ಮಿನುಗಾರಿಕೆ ಮಹಾವಿದ್ಯಾಲಯದ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ರಮೇಶ್ ಎಂ.ಆರ್. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಚ್.ಎನ್.ಆಂಜನೇಯಪ್ಪ ಸ್ವಾಗತಿಸಿದರು. ಪ್ರಾಧ್ಯಾಪಕ ಡಾ.ಶಿವಕುಮಾರ್ ಮಗದ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು