11:25 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಂಗಳೂರು ಕಂಬಳ: ರೀಲ್ಸ್, ಫೋಟೋಗ್ರಾಫಿ ಸ್ಪರ್ಧೆ; ಎಐ ಮೂಲಕ ಕಲಾಕೃತಿ ರಚನೆಗೂ ಅವಕಾಶ

25/12/2025, 22:03

ಮಂಗಳೂರು(reporterkarnataka.com): ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಪ್ರತಿ ವರ್ಷ ನಡೆಯುವ ಮಂಗಳೂರು ಕಂಬಳ ಡಿ. 27ರಂದು ನಗರದ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯಲಿದೆ.
ಉದ್ಘಾಟನೆ 27ರಂದು ಬೆಳಗ್ಗೆ 8.30ಕ್ಕೆ ಜರುಗಲಿದೆ. ಸಂಜೆ 6 ಗಂಟೆಗೆ ಬಹುಮಾನ.

ಬಹುಮಾನ ವಿತರಣೆ ನಡೆಯಲಿದೆ.28ರಂದು ಬೆಳಗ್ಗೆ 8 ಗಂಟೆಗೆ ಮಂಗಳೂರು ಕಂಬಳಕ್ಕೆ 9 ವರ್ಷ ಪೂರೈಸಿದ ಹಿನ್ನಲೆಯಲ್ಲಿ ನವ ವರುಷ ನವ ವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

1. ರಾಣಿ ಅಬ್ಬಕ್ಕ – ಚಾರಿತ್ರಿಕ ಚಿತ್ರಕಲಾ ಪ್ರದರ್ಶನ – ಪೋರ್ಚುಗೀಸರ ವಿರುದ್ಧ ದಿಟ್ಟತನದಿಂದ ಹೋರಾಟ ಮಾಡಿದ ತೌಳವ ಮಣ್ಣಿನ ಹೆಮ್ಮೆಯ ರಾಣಿ “ರಾಣಿ ಅಬ್ಬಕ್ಕ” ರವರ ಚಾರಿತ್ರಿಕ ಚಿತ್ರಕಲಾ ಪ್ರದರ್ಶನ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಪ್ರೊ. ತುಕರಾಮ ಪೂಜಾರಿಯವರ ಸಹಯೋಗದಿಂದ ನಡೆಯಲಿದೆ.
2. ವಂದೇ ಮಾತರಂ ೧೫೦ – ಸಾಮೂಹಿಕ ಗೀತ ಗಾಯನ – ಭಾರತ ಸ್ವಾತಂತ್ರದ ಧ್ಯೇಯ ಮಂತ್ರ ವಂದೇ ಮಾತರಂ ಗೀತೆಗೆ ೧೫೦ ವರ್ಷ ಪೂರೈಸಿದ ಹಿನ್ನಲೆಯಲ್ಲಿ ೧೫೦ ವಿದ್ಯಾರ್ಥಿನಿಯರಿಂದ ವಂದೇ ಮಾತರಂ ಸಾಮೂಹಿಕ ಗೀತ ಗಾಯನ – ಬೆಳಿಗ್ಗೆ ೮.೩೦ಕ್ಕೆ ನಡೆಯಲಿದೆ.
3. ಮಂಗಳೂರು ಕಂಬಳ ಪ್ರಶಸ್ತಿ ೨೦೨೫ – ಉದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ‘ಬ್ಯಾಕ್ ಟು ಊರು’ ಪರಿಕಲ್ಪನೆಗೆ ಶಕ್ತಿ ತುಂಬುತ್ತಿರುವ ೯ ಮಂದಿಗೆ ಮಂಗಳೂರು ಕಂಬಳ ಪ್ರಶಸ್ತಿ ೨೦೨೫ ನೀಡಿ ಗೌರವಿಸಲಾಗುವುದು.
4. ಏಕ್ ಪೇಡ್ ಮಾ ಕೆ ನಾಮ್ – ತಾಯಿಯ ಹೆಸರಿನಲ್ಲಿ ಒಂದು ಗಿಡ – ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನವ ಸಂಕಲ್ಪಗಳಲ್ಲಿ ಒಂದಾಗಿರುವ ‘ಏಕ್ ಪೇಡ್ ಮಾ ಕೆ ನಾಮ್ – ತಾಯಿಯ ಹೆಸರಿನಲ್ಲಿ ಒಂದು ಗಿಡ’ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.
5. ವಿಶೇಷ ಸಾಮರ್ಥ್ಯ ಹಾಗೂ ಓಲ್ಡ್ ಏಜ್ಡ್ ಹೋಮ್‌ನಲ್ಲಿ ನೆಲೆಸಿರುವ ಮಂಗಳೂರು ನಗರ ಪರಿಸರದ ನಿವಾಸಿಗಳನ್ನು ಕರೆತಂದು ಕಂಬಳ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುವುದು.
6. ರಂಗ್‌ದ ಕೂಟ – ಹೆಸರಿನಲ್ಲಿ ಚಿತ್ರಕಲಾ ಸ್ಪರ್ಧೆಯು ರಂಗ್‌ದ ಕಿನ್ಯ, ರಂಗ್‌ದ ಎಲ್ಯ, ರಂಗ್‌ದ ಮಲ್ಲ ಹಾಗೂ ರಂಗ್‌ದ ಕೂಟ ವಿಭಾಗಗಳಲ್ಲಿ ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೧೨.೩೦ರ ತನಕ ನಡೆಯಲಿರುತ್ತದೆ.
7. ಮಂಗಳೂರು ಕಂಬಳ ೨೦೨೫ ರೀಲ್ಸ್ – ಮಂಗಳೂರು ಕಂಬಳದ ಕ್ಷಣಗಳನ್ನು ರೀಲ್ಸ್ ಮಾಡುವ ಮೂಲಕ ಅತೀ ಹೆಚ್ಚು ವೀಕ್ಷಣೆ ಪಡೆಯುವ ರೀಲ್ಸ್ಗೆ ಬಹುಮಾನವನ್ನು ನೀಡಲಾಗುವುದು.
8. ಮಂಗಳೂರು ಕಂಬಳ ಫೋಟೊಗ್ರಾಫಿ – ಫೋಟೋಗ್ರಾಫಿ ಸ್ಪರ್ಧೆ ಆಯೋಜನೆ ಮಾಡಲಾಗಿದ್ದು, ನುರಿತ ತೀರ್ಪುಗಾರರ ಮೂಲಕ ಆಯ್ಕೆಯಾದ ಚಿತ್ರಕ್ಕೆ ನಗದು ಬಹುಮಾನ ನೀಡಲಾಗುವುದು.
9. ಎಐ ಕ್ರಿಯೇಟಿವ್ ಎಡಿಷನ್ – ಕೃತಕ ಬುದ್ಧಿಮತ್ತೆ (ಎಐ) ಉಪಯೋಗಿಸಿ ಮಂಗಳೂರು ಕಂಬಳ ಕಲಾಕೃತಿಯ ರಚಿಸುವ ಸ್ಪರ್ಧೆ ನಡೆಯಲಿದ್ದು ಉತ್ತಮ ಕಲಾಕೃತಿಗೆ ಬಹುಮಾನ ನೀಡಲಾಗುವುದು.

ತುಳುನಾಡಿನ ಶ್ರೀಮಂತ ಸಂಸ್ಕೃತಿಯ ಭಾಗವಾಗಿರುವ ಕಂಬಳ ನೂರಾರು ವರ್ಷಗಳ ಘನ ಪರಂಪರೆಯನ್ನು ಹೊಂದಿದ್ದು, ಈ ಮಣ್ಣಿನ ಧಾರ್ಮಿಕ ಕಟ್ಟುಕಟ್ಟಳೆಗಳೊಂದಿಗೆ ಗ್ರಾಮೀಣ ಸೊಗಡನ್ನು ಸಾರುವ ಇಲ್ಲಿನ ಜನಜೀವನವನ್ನು ಪ್ರತಿಬಿಂಬಿಸುವ ಕೃಷಿಕ ಮತ್ತು ಜಾನುವಾರುಗಳ ಬದುಕಿನ ನಂಟಿನೊಂದಿಗೆ ಆರಂಭವಾದ ಸಾಂಪ್ರದಾಯಿಕ ಕ್ರೀಡೆಯು ಕಾಲಕ್ರಮೇಣ ಆಧುನಿಕತೆಗೆ ತೆರೆದುಕೊಳ್ಳುವ ಮೂಲಕ ವಿಶ್ವವ್ಯಾಪಿಯಾಗಿ ಇನ್ನಷ್ಟು ಜನಪ್ರಿಯವಾಗುತ್ತ ಬಂದಿದೆ. ಕಂಬಳವನ್ನು ನಿಷೇಧಿಸುವ ಮೂಲಕ ಇಲ್ಲಿನ ಮಣ್ಣಿನ ಮೂಲ ಸತ್ವಕ್ಕೆ ಕೊಡಲಿ ಏಟು ಕೊಟ್ಟು ನಮ್ಮ ಸಂಸ್ಕೃತಿಗೆ ಧಕ್ಕೆ ತರಲು ಯತ್ನಿಸಿದವರ ವಿರುದ್ಧ ನಡೆದ ಪ್ರಬಲ ಹೋರಾಟದಲ್ಲಿ ಹುಟ್ಟಿಕೊಂಡ ಕಿಚ್ಚು ‘ಮಂಗಳೂರು ಕಂಬಳ’ವು ಇಂದು ನವೋತ್ಸಾಹದ ೯ನೇ ವರ್ಷಕ್ಕೆ ಹೆಜ್ಜೆಯನ್ನಿರಿಸಿದೆ. ಕಂಬಳ ಕ್ಷೇತ್ರವು ಇಂದು ಅನೇಕ ದಾಖಲೆಗಳ ಮೂಲಕ ಜನಾಕರ್ಷಣೆ ಪಡೆಯುತ್ತಿರುವ ಈ ಕಾಲಘಟ್ಟದಲ್ಲಿ ‘ಅಲೇ ಬುಡಿಯೆರ್’ ಎಂಬ ಝೇಂಕಾರವು ಮಾರ್ದನಿಸುವುದರ ಜೊತೆಗೆ ಕೋಣಗಳು ಓಡುವಾಗ ಕರೆಯ ನೀರು ಬಾನೆತ್ತರಕ್ಕೆ ಚಿಮ್ಮುವಂತೆ ಈ ಜನಪದ ಕ್ರೀಡೆಯ ಪರಿಮಳವು ಜಗದಗಲ ಪಸರಿಸಲಿ ಎಂಬ ಆಶಾವಾದದೊಂದಿಗೆ ಮಂಗಳೂರು ಕಂಬಳಕ್ಕೆ ತಮ್ಮನ್ನು ಪ್ರೀತಿಯಿಂದ ಆಹ್ವಾನಿಸುತ್ತಿದ್ದೇವೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು