6:36 AM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಮಂಗಳೂರು: ಕೊಂಕಣಿ ಅಕಾಡೆಮಿಯಿಂದ ‘ಕಾವ್ಯಾಂ ವ್ಹಾಳೊ-3ʼ ಕೊಂಕಣಿ ಕವಿಗೋಷ್ಠಿ

11/06/2025, 14:14

ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕಾವ್ಯಾಂ ವ್ಹಾಳೊ-3ʼ ಶೀರ್ಷಿಕೆಯಡಿ ಕವಿಗೋಷ್ಠಿ ಅಕಾಡೆಮಿ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ವಹಿಸಿ, ನೆರೆದಿರುವ ಎಲ್ಲಾ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಮತ್ತು ಕವಿಗಳಾದ ನವೀನ್‌ ಕುಲ್ಶೇಕರ್‌ ಅವರನ್ನು ಸನ್ಮಾನಿಸಲಾಯಿತು. ಅವರು ಮಾತಾನಾಡಿ, ಎಲ್ಲರನ್ನೂ ಹೃದಳಾಂತರದಿಂದ ಧನ್ಯವಾದ ಸಮರ್ಪಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾಹುಕಾರ್‌ ಕಿರಣ್‌ ಪೈ ಅವರು ಸನ್ಮಾನಿತರನ್ನು ಸನ್ಮಾನಿಸಿ, ಕೊಂಕಣಿಗರು, ವಿದ್ಯಾಭ್ಯಾಸದಲ್ಲಿ ಹಾಗೂ ಇತರೆ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡುತ್ತಾ ಇದ್ದಾರೆ. ಕೊಂಕಣಿ ಅಕಾಡೆಮಿಯು ಕವಿಗೋಷ್ಟಿ ಕಾರ್ಯಕ್ರಮವನ್ನು ಏರ್ಪಡಿಸಿ, ಕವಿಗಳಿಗೆ ಕವಿತೆಗಳನ್ನು ಸೃಷ್ಟಿಸಲು, ಹೊಸ ಹುಮ್ಮಸ್ಸನ್ನು ನೀಡಿದೆ. ಈ ಕಾರ್ಯಕ್ರಮವು ಹೀಗೆಯೇ ಮುಂದುವರಿದು ಹೋಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಪ್ರಮುಖ ಭಾಷಣಕಾರರಾಗಿ ಖ್ಯಾತ ಕವಿ ಟೈಟಸ್‌ ನೊರೊನ್ಹಾ ಅವರು ಕವಿತೆಗಳ ಇತಿಹಾಸ, ಹಿರಿಯ ಕವಿಗಳ ಬಗ್ಗೆ ಮಾಹಿತಿಯನ್ನು ಒದಗಿಸಿ ಉಪನ್ಯಾಸವನ್ನು ನೀಡಿದರು.
ಡಾ. ಪ್ಲಾವಿಯಾ ಕ್ಯಾಸ್ತೆಲಿನೊರವರು ಕವಿಗೋಷ್ಟಿಯನ್ನು ನಡೆಸಿದರು. ಮ್ಯಾಕ್ಸಿಂ ಲುದ್ರಿಗ್, ಸುಮಾ ವಸಂತ್, ಶ ಜೋರ್ಜ್ ಲಿಗೊರಿ, ಲೋಯ್ಡ್ ರೇಗೊ, ಅರವಿಂದ ಶ್ಯಾನಭಾಗ್, ಚೆಲ್ಸಿಯಾ ಪರ್ಲ್ ಕ್ಯಾಸ್ತೆಲಿನೊ, ಸ್ಮಿತಾ ಶೆಣೈ, ರೋಶನ್ ಕ್ರಾಸ್ತಾ, ಐರಿನ್ ರೆಬೆಲ್ಲೊ, ಮುಂತಾದವರು ತಮ್ಮ ಕವಿತೆಗಳನ್ನು ವಾಚಿಸಿದರು.
ಅಕಾಡೆಮಿ ಸದಸ್ಯರಾದ ದಯಾನಂದ ಮಡ್ಕೇಕರ್‌ರವರು ಧನ್ಯವಾದ ಸಮರ್ಪಿಸಿದರು. ಅಕಾಡೆಮಿ ಸದಸ್ಯರಾದ ಶ್ರೀ ನವೀನ್‌ ಲೋಬೊ, ಸಮರ್ಥ್‌ ಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸದಸ್ಯರಾದ
ಸಪ್ನಾ ಮೇ ಕ್ರಾಸ್ತಾರವರು ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು