9:37 AM Wednesday30 - September 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರಪಾಲಿಕೆ: 2026-27ನೇ ಸಾಲಿನ 156.17 ಕೋಟಿ ರೂ.ಗಳ ಮಿಗತೆ ಬಜೆಟ್ ಮಂಡನೆ

26/03/2026, 16:15

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ 2026-27ನೇ ಸಾಲಿನ
156.17 ಕೋಟಿ ರೂ.ಗಳ ಮಿಗತೆ ಬಜೆಟ್ ಗುರುವಾರ ಮಂಡಿಸಲಾಯಿತು.
ದ.ಕ. ಜಿಲ್ಲಾಧಿಕಾರಿಯೂ ಆಗಿರುವ ಪಾಲಿಕೆಯ ಆಡಳಿತಾಧಿಕಾರಿ ದರ್ಶನ್ ಎಚ್.ವಿ. ಅವರು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದರು. ಅಂದಾಜು (ಆರಂಭಿಕ ಶುಲ್ಕ ಸೇರಿದಂತೆ) ಮೊತ್ತ 93768.94 ಲಕ್ಷ ರೂ. (937.69 ಕೋಟಿ ರೂ.). ಇದರಲ್ಲಿ ಅಂದಾಜು 781.51 ಕೋಟಿ ರೂ. ವೆಚ್ಚ ಪಾವತಿಗಳಾಗಿದ್ದು, ಈ ಮೂಲಕ ಅಂದಾಜು 156.17 ಕೋಟಿ ರೂ.ಗಳ ಮಿಗತೆ ಬಜೆಟ್ ಇದಾಗಿದೆ.
2025-26ನೆ ಸಾಲಿನಲ್ಲಿ ಬಜೆಟ್‌ನಲ್ಲಿ ಒಟ್ಟು 644.64 ಕೋಟಿ ರೂ.ಗಳ ಜಮೆಗಳನ್ನು ನಿರೀಕ್ಷಿಸಲಾಗಿದ್ದು, ಡಿಸೆಂಬರ್ 2025ರ ಅಂತ್ಯಕ್ಕೆ 342.25 ಕೋಟಿ ರೂ. ಜಮೆಗಳನ್ನು ಸ್ವೀಕರಿಸಲಾಗಿದೆ. ಇದೇ ವೇಳೆ ಕಳೆದ ಸಾಲಿನಲ್ಲಿ 789.72 ಕೋಟಿ ರೂ. ಪಾವತಿಗಳಲ್ಲಿ ಪಾಲಿಕೆಯ ಸ್ವಯಂ ಸಂಪನ್ಮೂಲ ಕ್ರೋಢೀಕರಣ ಹಾಗೂ ಸರಕಾರದಿಂದ ಬಿಡುಗಡೆಯಾದ ಅನುದಾನಗಳ ಆಧಾರದಲ್ಲಿ ಡಿಸೆಂಬರ್ ಅಂತ್ಯಕ್ಕೆ 393.47 ಕೋಟಿ ರೂ.ಗಳನ್ನು ಪಾವತಿಸಿರುವುದಾಗಿ ಬಜೆಟ್ ನಲ್ಲಿ ತಿಳಿಸಲಾಯಿತುಮ
2026-27ನೇ ಸಾಲಿನಲ್ಲಿ ಆಸ್ತಿ ತೆರಿಗೆಯಿಂದ 90 ಕೋಟಿ ರೂ., ನೀರು ಸರಬರಾಜು ಶುಲ್ಕವಾಗಿ 55 ಕೋಟಿ ರೂ., ಘನತ್ಯಾಜ್ಯ ನಿರ್ವಹಣಾ ಕರ 26 ಕೋಟಿ ರೂ., ಇತರ ಆದಾಯವಾಗಿ 26.48 ಕೋಟಿ ರೂ., ಕಟ್ಟಡ ಪರವಾನಿಗೆ- ಪ್ರೀಮಿಯಂ ಎಫ್‌ಎಆರ್‌ನಿಂದ 26 ಕೋಟಿ ರೂ., ಮಾರುಕಟ್ಟೆ ಸಾಲ 7.31 ಕೋಟಿ ರೂ.,ಬ್ಯಾಂಕ್ ಬಡ್ಡಿ 15 ಕೋಟಿ ರೂ., ಮಾರುಕಟ್ಟೆ, ಇತರ ಬಾಡಿಗೆಯಾಗಿ 5.47 ಕೋಟಿ ರೂ., ರಸ್ತೆ ಕಡಿತ, ಪುನರ್ ನಿರ್ಮಾಣ ಶುಲ್ಕದಿಂದ 3 ಕೋಟಿ ರೂ.
ಸೇರಿದಂತೆ ಒಟ್ಟು 337.25 ಕೋಟಿ ರೂ.ಗಳ ಅಂದಾಜು ಆದಾಯವನ್ನು ನಿರೀಕ್ಷಿಸಲಾಗಿದೆ.
ರಾಜ್ಯ ಸರಕಾರದಿಂದ ವೇತನ, ಎಸ್‌ಎಫ್‌ಸಿ ಮುಕ್ತ ನಿಧಿ, ಪೌರ ಕಾರ್ಮಿಕರ ನೇರ ಪಾವತಿ ವೇತನ, ಸ್ಟ್ಯಾಂಪ್ ಶುಲ್ಕದ ಸರ್‌ಚಾರ್ಜ್ ಸೇರಿದಂತೆ ವಿವಿಧ ಯೋಜನೆಗಳಿಗೆ ಒಟ್ಟು 199.23 ಕೋಟಿ ರೂ. ಅನುದಾನವನ್ನು ನಿರೀಕ್ಷಿಸಲಾಗಿದೆ.
ಕೇಂದ್ರದಿಂದ ಅಮೃತ್ 2.0 ಜಲ್ ಹಿ ಅಮೃತ್, ನಲ್ಮ್, ಸ್ವಚ್ಛ ಭಾರತ ಮಿಷನ್, 15ನೇ ಹಣಕಾಸು ಮುಕ್ತ ಅನುದಾನ, 16ನೇ ಹಣಕಾಸು, ಎನ್‌ಜಿಟಿ ಸೇರಿದಂತೆ ಒಟ್ಟು 93.36 ಕೋಟಿ ರೂ.ಗಳನ್ನು ನಿರೀಕ್ಷಿಸಲಾಗಿದೆ.
ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಕಂದಾಯ ಅಧಿಕಾರಿ (ಆಡಳಿತ) ಅಕ್ಷತಾ ಉಪಸ್ಥಿತರಿದ್ದರು.
ಜನಪ್ರತಿನಿಧಿಗಳ ಆಡಳಿತವಿಲ್ಲದ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಯಾದ ಜಿಲ್ಲಾಧಿಕಾರಿ ಬಜೆಟ್ ಮಂಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು