ಇತ್ತೀಚಿನ ಸುದ್ದಿ
Mangaluru | ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣ: 8 ಮಂದಿ ಆರೋಪಿಗಳ ಬಂಧನ; ಇನ್ನಿಬ್ಬರಿಗಾಗಿ ಶೋಧ
03/05/2025, 13:37

ಮಂಗಳೂರು(reporterkarnataka.com): ಬಜಪೆ ಸಮೀಪ ನಡೆದ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಅಬ್ದುಲ್ ಸಫ್ವಾನ್, ನಿಯಾಜ್, ಮಹಮ್ಮದ್ ಮುಸಮ್ಮೀರ್, ಕಲಂದರ್ ಶಾಫಿ, ಅದಿಲ್ ಮೆಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್ ಹಾಗೂ ರಂಜಿತ್ ಎಂದು ಗುರುತಿಸಲಾಗಿದೆ. ಇನ್ನೂ ಇಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ. ಅಬ್ದುಲ್ ಸಫ್ವಾನ್ ಪ್ರಕರಣ ಪ್ರಮುಖ ಸೂತ್ರದಾರ ಎನ್ನಲಾಗಿದೆ.
ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಸುಹಾಸ್ ಶೆಟ್ಟಿ ಅವರನ್ನು ಗುರುವಾರ ಬಜಪೆ ಬಳಿಯ ಕಿನ್ನಿಪದವು ಎಂಬಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ತಂಡವೊಂದು ತಲವಾರಿನಿಂದ ಭೀಕರವಾಗಿ ಹಲ್ಲೆಗೈದು ಕೊಲೆ ಮಾಡಿತ್ತು. ಸುಹಾಸ್ ಶೆಟ್ಟಿ ರೌಡಿ ಶೀಟರ್ ಆಗಿದ್ದು, ಫಾಝೀಲ್ ಕೊಲೆ ಪ್ರಕರಣ ಆರೋಪಿ.