7:05 PM Friday27 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ…

ಇತ್ತೀಚಿನ ಸುದ್ದಿ

ಅಕ್ಷರ ಸಂತ ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್‌, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್

27/03/2026, 18:14

ಅಕ್ಷರ ಸಂತ ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್‌, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್

ಮಂಗಳೂರು(reporterkarnataka.com): ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ, ಇತ್ತೀಚೆಗಷ್ಟೇ ನಿಧನರಾದ ಯಕ್ಷಗಾನದ ಮೇರು ಕಲಾವಿದ ಸೂರಿಕುಮೇರು ಗೋವಿಂದ ಭಟ್ ಹಾಗೂ ದೈವ ನರ್ತಕ ರವೀಶ್ ಪಡುಮಲೆ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಕಟಿಸಿದೆ.
​ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದ ಕುರಿತು ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರು ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ಮಾ. 28ರಂದು ಪೂರ್ವಾಹ್ನ 11 ಗಂಟೆಗೆ ವಿವಿ ಆವರಣದ ಮಂಗಳಾ ಸಭಾಂಗಣದಲ್ಲಿ ಈ ಸಂಭ್ರಮ ನಡೆಯಲಿದೆ. ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪದವಿ ಪ್ರದಾನ ಮಾಡಲಿದ್ದಾರೆ. ​ಅತಿಥಿಗಳಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಉಪಸ್ಥಿತರಿರುವರು. ಸಂಸದ ಕ್ಯಾ. ಬ್ರಿಜೇಶ್ ಚೌಟ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.
ಈ ಬಾರಿ ಒಟ್ಟು 162 ಸಂಶೋಧನಾ ವಿದ್ಯಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಇವರಲ್ಲಿ 74 ಮಹಿಳೆಯರು ಹಾಗೂ 88 ಪುರುಷರಿದ್ದಾರೆ. ವಿಶೇಷವೆಂದರೆ 11 ಮಂದಿ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳೂ ಈ ಪಟ್ಟಿಯಲ್ಲಿದ್ದಾರೆ. ವಿವಿಧ ವಿಭಾಗಗಳಲ್ಲಿ 56 ಚಿನ್ನದ ಪದಕ ಹಾಗೂ 57 ನಗದು ಬಹುಮಾನಗಳನ್ನು ವಿತರಿಸಲಾಗುವುದು. ಒಟ್ಟು 147 ರ್ಯಾಂಕ್ ಗಳ ಪೈಕಿ ಮೊದಲ ರ್ಯಾಂಕ್ ಗಳಿಸಿದ 69 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಗುವುದು.
​”ಶಿಕ್ಷಣ, ಕಲೆ ಮತ್ತು ಜಾನಪದ ಕ್ಷೇತ್ರದ ಈ ಮೂವರು ಸಾಧಕರನ್ನು ಗೌರವಿಸುವ ಮೂಲಕ ವಿಶ್ವವಿದ್ಯಾನಿಲಯವು ತನ್ನ ಘನತೆಯನ್ನು ಹೆಚ್ಚಿಸಿಕೊಂಡಿದೆ.
ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವ ಪ್ರೊ. ದೇವೇಂದ್ರಪ್ಪ, ಪರೀಕ್ಷಾಂಗ ಕುಲಸಚಿವ ಗಣೇಶ್ ಸಂಜೀವ ಹಾಗೂ ಹಣಕಾಸು ಅಧಿಕಾರಿ ಪಂಚಲಿಂಗಸ್ವಾಮಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು