3:18 PM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ | ಸ್ಥಗಿತಗೊಂಡಿದ್ದ ಕೋರ್ಸ್‌ಗಳಿಗೆ ಪುನರ್ಜೀವ: ಅರ್ಜಿ ಆಹ್ವಾನ; ವಿದ್ಯಾರ್ಥಿಗಳಿದ್ದರೆ ಪುನರಾರಂಭ: ಕುಲಪತಿ ಡಾ. ಪಿ.ಎಲ್.ಧರ್ಮ

30/07/2026, 21:32

ಮಂಗಳೂರು(reporterkarnataka.com): ಕಳೆದ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಸ್ನಾತಕೋತ್ತರ ಕೋರ್ಸ್‌ಗಳು ಸೇರಿದಂತೆ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲ 46 ಸ್ನಾತಕೋತ್ತರ ಕೋರ್ಸ್‌ಗಳಿಗೆ ಈ ಬಾರಿ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದೆ. ಸ್ಥಗಿತಗೊಂಡಿರುವ ವಿಭಾಗಗಳಿಗೆ ಅಗತ್ಯ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆದರೆ, ಸರ್ಕಾರದಿಂದ ವಿಶೇಷ ಅನುಮತಿ ಪಡೆದು ತರಗತಿಗಳನ್ನು ಪುನರಾರಂಭಿಸಲಾಗುವುದು ಎಂದು ಕುಲಪತಿ ಡಾ. ಪಿ. ಎಲ್. ಧರ್ಮ ತಿಳಿಸಿದರು.

ನಗರದ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಸಂಖ್ಯಾಶಾಸ್ತ್ರ, ಮೆಟೀರಿಯಲ್ ಸೈನ್ಸ್, ಇಲೆಕ್ಟ್ರಾನಿಕ್ಸ್, ಮೆರೈನ್ ಜಿಯಾಲಜಿ, ಬಯೋಕೆಮಿಸ್ಟ್ರಿ ಹಾಗೂ ಎನ್ವಿರಾನ್‌ಮೆಂಟ್ ಸೈನ್ಸ್ ಸೇರಿದಂತೆ ಆರು ಕೋರ್ಸ್‌ಗಳನ್ನು ವಿದ್ಯಾರ್ಥಿಗಳ ಕೊರತೆಯಿಂದ ಸ್ಥಗಿತಗೊಳಿಸಲಾಗಿತ್ತು ಎಂದು ಹೇಳಿದರು. ಇಲೆಕ್ಟ್ರಾನಿಕ್ಸ್‌ಗೆ ಬದಲಾಗಿ ಆರಂಭಿಸಿರುವ ಸೈಬರ್ ಸೆಕ್ಯುರಿಟಿ ಕೋರ್ಸ್‌ಗೆ ಉತ್ತಮ ಸ್ಪಂದನೆ ದೊರೆತಿದ್ದು, ತುಳು ಮತ್ತು ಕೊಂಕಣಿ ಭಾಷಾ ಕೋರ್ಸ್‌ಗಳಿಗೆ ಶಾಶ್ವತ ಮಾನ್ಯತೆ ಹಾಗೂ ಸರ್ಕಾರದಿಂದಲೇ ಬೋಧಕರ ನೇಮಕಕ್ಕೆ ಪ್ರಯತ್ನ ನಡೆಯುತ್ತಿದೆ ಎಂದು ಅವರು ನುಡಿದರು.
ಪದವಿ ಅಂತಿಮ ಸೆಮಿಸ್ಟರ್ ಫಲಿತಾಂಶಗಳನ್ನು ಈಗಾಗಲೇ ಪ್ರಕಟಿಸಲಾಗಿದ್ದು, 17,850 ವಿದ್ಯಾರ್ಥಿಗಳ ಪೈಕಿ ತಾಂತ್ರಿಕ ಸಮಸ್ಯೆಯಿರುವ 201 ಪ್ರಕರಣಗಳನ್ನು ಹೊರತುಪಡಿಸಿ ಉಳಿದ ಎಲ್ಲರ ಫಲಿತಾಂಶ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಮತ್ತು ಉದ್ಯೋಗದ ಹಿತದೃಷ್ಟಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಕನ್ಸಾಲಿಡೇಟೆಡ್ ಮಾರ್ಕ್ಸ್ ಕಾರ್ಡ್ ನೀಡಲಾಗುತ್ತಿದೆ ಎಂದು ತಿಳಿಸಿದರು. ಕ್ಯಾಂಪಸ್‌ನಲ್ಲಿ ಮೂಲಸೌಕರ್ಯ ಸುಧಾರಣೆ, ಕಂಪ್ಯೂಟರ್ ಲ್ಯಾಬ್ ಮತ್ತು ಎಐ ಸೌಲಭ್ಯಗಳ ನವೀಕರಣ ಹಾಗೂ ಅತಿಥಿ ಉಪನ್ಯಾಸಕರಿಗೆ ಸಕಾಲದಲ್ಲಿ ವೇತನ ಪಾವತಿಸುವ ವ್ಯವಸ್ಥೆಯನ್ನೂ ಜಾರಿಗೆ ತರಲಾಗಿದೆ ಎಂದರು.
ವಿಶ್ವವಿದ್ಯಾನಿಲಯದ 461 ನಿವೃತ್ತ ನೌಕರರಿಗೆ ಪೆನ್ಷನ್ ಟ್ರಸ್ಟ್ ಮೂಲಕ ತಿಂಗಳ ಆರಂಭದಲ್ಲೇ ನಿವೃತ್ತಿ ವೇತನ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ ಕುಲಪತಿ, ಬೆಳಪು ಕೇಂದ್ರವನ್ನು ಸರ್ಕಾರಿ ಪ್ರಾಯೋಜಿತ ಸ್ಪೋರ್ಟ್ಸ್ ಅಕಾಡೆಮಿಯಾಗಿ ಅಭಿವೃದ್ಧಿಪಡಿಸುವ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು. ವಿಶ್ವವಿದ್ಯಾನಿಲಯಕ್ಕೆ ಎ++ ನ್ಯಾಕ್ ಗ್ರೇಡ್ ಪಡೆಯುವ ವಿಶ್ವಾಸವಿದ್ದು, ಖಾಲಿ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಇವೆಂಟ್ ಮ್ಯಾನೇಜ್‌ಮೆಂಟ್ ಸೇರಿದಂತೆ ಹೊಸ ಕೌಶಲ್ಯಾಧಾರಿತ ಕೋರ್ಸ್‌ಗಳನ್ನು ಆರಂಭಿಸಲು ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು