ಇತ್ತೀಚಿನ ಸುದ್ದಿ
ಮಂಗಳೂರು ವಿಮಾನ ನಿಲ್ದಾಣ: ಶಾರ್ಜಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 16.79 ಲಕ್ಷ ಮೌಲ್ಯದ ಚಿನ್ನ ವಶ; ಕಾಸರಗೋಡು ನಿವಾಸಿ ಬಂಧನ
15/12/2021, 08:13
ಮಂಗಳೂರು(reporterkarnataka.com):
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತೆರಿಗೆ ವಂಚಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 16.79 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ಒಬ್ಬನನ್ನು ಬಂಧಿಸಿದ್ದಾರೆ.
ಕಾಸರಗೋಡಿನ ವ್ಯಕ್ತಿಯೊಬ್ಬ ಶಾರ್ಜಾದಿಂದ 16,79,860 ರೂ . ಮೌಲ್ಯದ 24 ಕ್ಯಾರೆಟ್ನ 338 ಗ್ರಾಂ ಚಿನ್ನವನ್ನು ಸಾಗಾಟ ಮಾಡುತ್ತಿದ್ದ. ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.
ಆರೋಪಿ ಸ್ಟಿರಿಯೋ ಕೇಬಲ್ , ಬರ್ನರ್ ಸ್ಟ್ಯಾಂಡ್ , ಕ್ಯಾಂಡಲ್ ಹೋಲ್ಡರ್ ಸ್ಟ್ಯಾಂಡ್ಗಳಲ್ಲಿಟ್ಟು ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.