ಇತ್ತೀಚಿನ ಸುದ್ದಿ
ಮಂಗಳೂರು ವಿವಿಯಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರ ಸ್ಥಾಪನೆ: ಸರಕಾರ ಘೋಷಣೆ
05/03/2022, 10:59
ಬೆಂಗಳೂರು(reporterkarnataka.com):
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿಯು ಕಳೆದ ಎರಡು ವರ್ಷಗಳಿಂದ
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರಬೇಕೆಂಬ ಒತ್ತಾಸೆಯನ್ನು ಸರಕಾರಕ್ಕೆ ವ್ಯಕ್ತಪಡಿಸಿತ್ತು. ಸತತ ಪ್ರಯತ್ನದ ಫಲವಾಗಿ ಕರ್ನಾಟಕ ಘನ ಸರಕಾರ 2022ರ ಬಜೆಟ್ನಲ್ಲಿಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು ಮಂಜೂರು ಮಾಡಿದೆ ಎಂದು ತಿಳಿಸಲು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿ ಖುಷಿ ಪಡುತ್ತಿದೆ.
ಆಕಾಡೆಮಿಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಡಿ.ವಿ ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರುಗಳಾದ ಅಂಗಾರ ಎಸ್, ಸುನಿಲ್ ಕುಮಾರ್, ಸಿ.ಎನ್.ಅಶ್ವತ್ಥನಾರಾಯಣ, ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರುಗಳಾದ ಕೆ.ಜಿ ಬೋಪಯ್ಯ, ಸಂಜೀವ ಮಠಂದೂರು, ಸಂಸದರಾದ ಶೋಭಾ ಕರಂದ್ಲಾಜೆ, ಅವರಗಳ ಮೂಲಕ ಸರಕಾರಕ್ಕೆ ಮನವಿಯನ್ನು ಸಲ್ಲಿಸಿ, ಅರೆಭಾಷೆ ಸಂಶೋಧನಾ ಕೇಂದ್ರವನ್ನು ಕಾರ್ಯರೂಪಕ್ಕೆ ತರಲು ಸಹಕಾರಿಸಿರುತ್ತಾರೆ. ಈ ಬಗ್ಗೆ ಸಹಕರಿಸಿದ ಪ್ರತಿಯೊಬ್ಬರಿಗೂ ಅಕಾಡೆಮಿ ಕೃತಜ್ಞತೆ ವ್ಯಕ್ತಡಿಸುತ್ತದೆ.