3:33 AM Friday10 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ…

ಇತ್ತೀಚಿನ ಸುದ್ದಿ

ಮಂಗಳೂರಿನ 18 ಕೇಂದ್ರಗಳಲ್ಲಿ ನಾಳೆ ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿ

04/05/2024, 18:56

ಮಂಗಳೂರು (reporterkarnataka.com):- ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಇದೇ ಮೇ 5 ರಂದು 18 ಪರೀಕ್ಷಾ ಕೇಂದ್ರಗಳಲ್ಲಿ NEET (UG) 2024 ಪರೀಕ್ಷೆಗಳು ನಡೆಯಲಿದೆ.
ಈ ಸಂದರ್ಭದಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಯನ್ನು ಸುಸೂತ್ರವಾಗಿ ಪಾರದರ್ಶಕವಾಗಿ ಮತ್ತು ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಆಗಿರುವ ಉಪ ಪೋಲಿಸ್ ಆಯುಕ್ತರಾದ ಸಿದ್ದಾರ್ಥ್ ಗೋಯಲ್ ಅವರು ಆದೇಶಿಸಿದ್ದಾರೆ.
*ನಿಷೇದಿತಾ ಅವಧಿಯಲ್ಲಿ:*
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು/ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಕಾರಕ (ಆಸಿಡ್) ಯಾ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.
ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ನಾರ್ವಜನಿಕರು ಐದು ಅಥವಾ ಐದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ತಿರುಗಾಡುವುದನ್ನು ನಿಷೇಧಿಸಲಾಗಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಇರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಲಾಗಿದೆ.
ಪರೀಕ್ಷಾ ಕೇಂದ್ರದ ಆವರಣದಲ್ಲಿ ಮೊಬೈಲ್ ದೂರವಾಣಿ, ಬ್ಲೂಟೂತ್ ಹಾಗೂ ಪೇಜರ್ ಇತ್ಯಾದಿ ಎಲೆಕ್ಟ್ರಾನಿಕ್ಸ್ ಸಂಪರ್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಉಪಪೋಲಿಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು