2:36 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

Good News: ಮಂಗಳೂರಿನಲ್ಲಿ ಉದ್ಯೋಗಾಕಾಂಕ್ಷಿಗಳಿಗಾಗಿ ನಾಳೆ ಬೃಹತ್ ಉದ್ಯೋಗ ಮೇಳ

02/03/2022, 10:15

ಮಂಗಳೂರು(reporterkarnataka.com):

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಮಾರ್ಚ್ 3 ರ  ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಟ್ಟಾರ – ಕೂಳೂರು ಪ್ರಮುಖ ರಸ್ತೆಯಲ್ಲಿರುವ ಗೋಲ್ಡ್ ಪಿಂಚ್ ಸಿಟಿ ಮೈದಾನದ ಮುಂಭಾಗದ ಎಜೆ ಇಂಜಿನಿಯರಿಂಗ್ ಕಾಲೇಜ್ ನಲ್ಲಿ‌ “ಬೃಹತ್ ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ‌ ಹೆಸರಾಂತ ಕಂಪನಿಗಳಾದ ಟೀಮ್ ಲೀಸ್, ಸಿನೋಪ್ ಟೆಕ್, ಹೆಚ್.ಜಿ.ಎಸ್, ಬಿ.ಓ.ಎಸ್.ಸಿ.ಹೆಚ್, ಬೈಜೂಸ್, ಟಾಟಾ ಕಮ್ಯುನಿಕೇಷನ್ಸ್, ಟೊಯೊಟಾ ಕಿರ್ಲೋಸ್ಕರ್ ಮೋಟರ್, ಎನ್.ಟಿ.ಟಿ.ಎಫ್ ಸೇರಿದಂತೆ ಮುಂತಾದ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ.

ಬಿಎ, ಬಿ.ಎಸ್ಸಿ, ಬಿಕಾಂ, ಐಟಿಐ, ಡಿಪ್ಲೋಮಾ, ಬಿಇ ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಫೋಟೋ, ಆಧಾರ್ ಕಾರ್ಡ್ ಹಾಗೂ ಸ್ವವಿವರದ ಅರ್ಜಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಓರ್ವ ಅಭ್ಯರ್ಥಿಗೆ ಗರಿಷ್ಠವೆಂದರೆ 3 ಕಂಪನಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ತಮ್ಮ ವಿದ್ಯಾರ್ಹತೆಗೆ ಸರಿಹೊಂದುವ 3 ಕಂಪನಿಗಳನ್ನು ಆಯ್ಕೆಮಾಡಿ ಅರ್ಜಿ ಸಲ್ಲಿಸಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಈ ಕಾರ್ಯಕ್ರಮಕ್ಕೆ ರಾಜ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ‌ ಶ್ರೀ ಅಶ್ವತ್ ನಾರಾಯಣ್ ಅವರು ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಕಾರ್ಯಕ್ರಮದ ಸದಾವಕಾಶ ಪಡೆದುಕೊಳ್ಳಿ. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವವರು 

 www.skillconnet.kaushalkar.com ಇಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ವೇದವ್ಯಾಸ್ ಕಾಮತ್ ಅವರ ಶಾಸಕರ ಕಚೇರಿಗೆ ಭೇಟಿ ನೀಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು