ಇತ್ತೀಚಿನ ಸುದ್ದಿ
ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ವನಮಹೋತ್ಸವ
01/07/2022, 19:24

ಮಂಗಳೂರು(reporterkarnataka.com): ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ವನಮಹೋತ್ಸವ ಕಾರ್ಯಕ್ರಮ ಜರುಗಿತು.
ವನಮಹೋತ್ಸವದ ಅಂಗವಾಗಿ ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಕಚೇರಿ ಸಿಬ್ಬಂದಿಗಳಿಗೆ ಗಿಡ ನೀಡುವ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರಾಧ ಮತ್ತು ಟ್ರಾಫಿಕ್ ಡಿಸಿಪಿ ದಿನೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಪೊಲೀಸ್ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಮಂಗಳೂರು ನಗರ ಪೊಲೀಸ್ ಇಲಾಖೆಯ ಸಮಾಲೋಚಕಿ ಸುಶ್ಮಿತ,ಆಯೋಜಿಸಿದ್ದರು.