11:17 PM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ನಿಶಿತ್ ಶೆಟ್ಟಿ ನಿರ್ದೇಶನದ  ‘ವೃಷ್ಟಿ’ ಚಲನಚಿತ್ರ ಪೋಸ್ಟರ್ ಬಿಡುಗಡೆ

06/10/2022, 21:35

ಮಂಗಳೂರು(reporter Karnataka.com):

ಆಸೆಗಳ ಲೋಕದಲಿ…

ಅರಿಯದೆ ಮೂಡಿದ ಕಥೆ ಇದು….

ಭಾವನೆಗಳ ಸಾಲಿನಲಿ….

ತಿಳಿಯದೆಯೇ ಹರಿದ ವ್ಯಥೆ ಇದು….

*ವೃಷ್ಟಿ..* (ಕನ್ನಡ ಚಲನಚಿತ್ರ)

ವಾಗ್ಮಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ಸಾಧನಾ ಜಗದೀಶ್ ಶೆಟ್ಟಿಯವರ ನಿರ್ಮಾಣದ ಹೊಸ ಕನ್ನಡ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನ ಪ್ರಕಾಶ್ ನಾಥ ಮಂದಿರದಲ್ಲಿ ನಡೆಯಿತು. 


ಪ್ರಕಾಶ್ ನಾಥ ಮಂದಿರದ ಸುಮಂತ್  ಅವರು ಪೋಸ್ಟರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಧಾರ್ಮಿಕ ಮುಖಂಡ ನಾಗರಾಜ್ ಆಚಾರ್ಯ ಉಪಸ್ಥಿತಿ ಇದ್ದರು. 

ಈ ಮೊದಲು ಕನಸು ಮಾರಾಟಕ್ಕಿದೆ ಚಲನಚಿತ್ರ ಹಾಗೂ ವನಜಾ ವೆಬ್ ಸೀರಿಸ್, ಮಾಡಿದ ತಂಡವೇ ಈ ವೃಷ್ಟಿ ಚಲನಚಿತ್ರವನ್ನು ಚಿತ್ರೀಕರಿಸಿದ್ದು ನಿಶಿತ್ ಶೆಟ್ಟಿಯವರು ನಿರ್ದೇಶನ ಮಾಡಿದ್ದಾರೆ, ಸಂತೋಷ್ ಆಚಾರ್ಯ ಗುಂಪಲಾಜೆ ಕ್ಯಾಮರ ಕೈಚಳಕ ಈ ಚಿತ್ರದಲ್ಲಿದೆ. ಗಣೇಶ್ ನೀರ್ಚಾಲ್ ಸಂಕಲನ ಮಾಡಿದ್ದು,ಸಂಗೀತ ನಿರ್ದೇಶನವನ್ನು ಮಾನಸ ಹೊಳ್ಳರವರು ನಿರ್ವಹಿಸಿದ್ದಾರೆ.ಮುಖ್ಯ ಭೂಮಿಕೆಯಲ್ಲಿ ಯಶವಂತ್ ಬೆಳ್ತಂಗಡಿ, ಸಿಂಚನಾ ಪಿ‌.ರಾವ್,ವಿನಿಶಾ,ಕಾಮಿಡಿ ಕಿಲಾಡಿ ಖ್ಯಾತಿಯ ಪ್ರವೀಣ್ ಜೈನ್, ಯುವ ಶೆಟ್ಟಿ,ರಾಕೇಶ್ ಪೂಜಾರಿ,ಅನೀಶ್ ಪೂಜಾರಿ ಮುಂತಾದವರು ಅಭಿನಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು