ಇತ್ತೀಚಿನ ಸುದ್ದಿ
ಮಂಗಳೂರಿನಲ್ಲಿ ‘ಶಕ್ತಿ’ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ
11/06/2023, 16:04
ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಸರಕಾರಿ ಬಸ್ ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವಾಗಿ ನೀಡುವ ಶಕ್ತಿ ಯೋಜನೆಗೆ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾನುವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್,
ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗದ ನಿಯಂತ್ರಣ ಅಧಿಕಾರಿ ರಾಜೇಶ್ ಶೆಟ್ಟಿ ಸೇರಿದಂತೆ ಹಲವಾರು ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.