11:01 AM Thursday16 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಶ್ರೀಲಂಕಾ ಮೂಲದ 35 ಪ್ರಜೆಗಳ ಬಂಧನ:  ತಮಿಳುನಾಡು ಮೂಲಕ ಆಗಮನ; ಮಾನವ ಕಳ್ಳಸಾಗಣಿಕೆ ಶಂಕೆ

11/06/2021, 16:28

ಮಂಗಳೂರು(reporterkarnataka news): ಶ್ರೀಲಂಕಾ ಮೂಲದ 35 ಮಂದಿಯನ್ನು ನಗರದಲ್ಲಿ ಬಂಧಿಸಲಾಗಿದೆ. ಮಂಗಳೂರು ಹಾಗೂ ತಮಿಳುನಾಡು ಪೊಲೀಸರು ಜಂಟೀ ಕಾರ್ಯಾಚರಣೆ ನಡೆಸಿ ಅಕ್ರಮ ಪ್ರವೇಶ ಮಾಡಿದವರನ್ನು ಬಂಧಿಸಿದ್ದಾರೆ.

ಇದೊಂದು ಮಾನವ ಕಳ್ಳ ಸಾಗಾಣಿಕೆ ಪ್ರಕರಣ ಎನ್ನಲಾಗಿದೆ. ಏಜೆಂಟ್ ಗಳ ಮೂಲಕ ಇವರು ಶ್ರೀಲಂಕಾದಿಂದ ಭಾರತ ಪ್ರವೇಶಿಸಿದ್ದಾರೆ. ಪ್ರತಿಯೊಬ್ಬರಿಂದ 8-10 ಲಕ್ಷ ರೂ. ಏಜೆಂಟರು ಪಡೆದುಕೊಂಡಿದ್ದಾರೆ. ಭಾರತದ ಮೂಲಕ ಕೆನಡಾಕ್ಕೆ ಕಳುಹಿಸುವ ಭರವಸೆ ಇವರಿಗೆ ನೀಡಲಾಗಿತ್ತು.

ಮೊದಲಿಗೆ ಇವರನ್ನು ಕಳೆದ ತಿಂಗಳು ತಮಿಳುನಾಡಿಗೆ ಕರೆದು ತರಲಾಯಿತು. ಅಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಅಲ್ಲಿ ಸುರಕ್ಷಿತವಲ್ಲ ಎಂದು ಮಂಗಳೂರಿಗೆ ಸ್ಥಳಾಂತರಿಸಲಾಯಿತು ಎಂದು ತಿಳಿದು ಬಂದಿದೆ.

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಯಾವುದೇ ತಪಾಸಣೆಯಿಲ್ಲದೆ ಅವರು ಹೇಗೆ ರಾಜ್ಯ ಪ್ರವೇಶಿಸಿದರು ಎನ್ನುವ ಕುರಿತು ತನಿಖೆ ನಡೆಯುತ್ತಿದೆ. ಮಂಗಳೂರಿನ ಲಾಡ್ಜ್ ಮತ್ತು ಬಾಡಿಗೆ ಮನೆಯೊಂದರಲ್ಲಿ ಅವರಿಗೆ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿತ್ತು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು