6:14 AM Thursday17 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ವಿಶಿಷ್ಟ ಚೇತನ ಮಕ್ಕಳಿಗಾಗಿ ವಿಶೇಷ ಪಾರ್ಕ್‌ ನಿರ್ಮಾಣ: ಶಾಸಕ ವೇದವ್ಯಾಸ ಕಾಮತ್

13/02/2023, 20:49

ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್ ಗಂಗನಪಳ್ಳ ಕೆರೆಯ ಸಮೀಪವೇ ವಿಶೇಷ ಚೇತನ ಮಕ್ಕಳಿಗಾಗಿ ಇನ್ನೊಂದು ಪಾರ್ಕ್‌ ಹಾಗೂ ಆಟದ ಮೈದಾನ ನಿರ್ಮಾಣವಾಗಲಿದೆ ಎಂದು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.

ಮಂಗಳೂರಿನಲ್ಲಿ ಎರಡು ವಿಶೇಷ ಚೇತನ ಮಕ್ಕಳ ಶಾಲೆಗಳು ಕಾರ್ಯ ನಿರ್ವಹಿಸುತ್ತಿದ್ದು, ಚೇತನಾ ಶಾಲೆಯ ವಿನೋದ್ ಶೆಣೈ ಹಾಗೂ ಸಾನ್ನಿಧ್ಯ ವಿಶೇಷ ಮಕ್ಕಳ ಶಾಲೆಯ ವಸಂತ್ ಶೆಟ್ಟಿ ಅವರು ಈ ಮಕ್ಕಳ ಆಟ-ಪಾಠ ಮತ್ತು ಬೌದ್ಧಿಕ ವಿಕಾಸಕ್ಕಾಗಿ ಪ್ರತ್ಯೇಕ ಪಾರ್ಕ್ ಮತ್ತು ಆಟದ ಮೈದಾನ ನಿರ್ಮಿಸಿಕೊಡುವಂತೆ ಶಾಸಕ ಕಾಮತ್ ಅವರಿಗೆ ಮನವಿ ಸಲ್ಲಿಸಿದ್ದರು.
ಮನವಿಯನ್ನು ಪರಿಗಣಿಸಿದ ಶಾಸಕರು ಮಂಗಳೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಅಧ್ಯಕ್ಷ ರವಿಶಂಕರ ಮಿಜಾರು ಅವರ ಜತೆ ಚರ್ಚಿಸಿ, ಮಂಗಳೂರು ಮಹಾನಗರ ಪಾಲಿಕೆಯಲ್ಲೂ ಪ್ರಸ್ತಾವ ಮಂಡಿಸಿ ಅನುಮೋದನೆ ದೊರಕವಂತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕದ್ರಿ ಪಾರ್ಕಿನ ಒಳಗಡೆ 50 ಸೆಂಟ್ಸ್‌ ಜಾಗದಲ್ಲಿ ವಿಶೇಷ ಚೇತನ ಮಕ್ಕಳ ಪಾರ್ಕ್‌ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಶೀಘ್ರವೇ ಇದು ಕಾರ್ಯಗತಗೊಳ್ಳಲಿದ್ದು, ಸ್ಮಾರ್ಟ್‌ ಸಿಟಿ ಮಂಗಳೂರಿನಲ್ಲಿ ಹೊಸದೊಂದು ಸೌಲಭ್ಯ ವಿಶಿಷ್ಟ ಚೇತನ ಮಕ್ಕಳು ಮತ್ತು ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ. ಪಾರ್ಕ್ ನಿರ್ಮಾಣ ಕುರಿತು ವಿಶೇಷ ಮಕ್ಕಳ ಪೋಷಕರು, ಶಿಕ್ಷಕರು ಹಾಗೂ ಸಂಘ ಸಂಸ್ಥೆಗಳು ಮೆಚ್ಚುಗೆ ವ್ಯಕ್ತಪಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು