2:25 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ: ಪ್ರಶಸ್ತಿ ಪ್ರದಾನ, ಪ್ರಮಾಣ ಪತ್ರ ವಿತರಣೆ

01/06/2023, 22:26

ಮಂಗಳೂರು(reporterkarnataka.com): ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಘಟಕ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರ ಕರ್ತರ ಸಂಘ ಮಂಗಳೂರು, ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಯವ ರೆಡ್ ಕ್ರಾಸ್ ಯೆನೆಪೋಯ ವಿಶ್ವ ವಿದ್ಯಾನಿಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಹಂಪನಕಟ್ಟೆ ಮಂಗಳೂರು ವಿಶ್ವ ವಿದ್ಯಾ ನಿಲಯದ ರವೀಂದ್ರನಾಥ ಕಲಾಭವನದಲ್ಲಿ ಗುರುವಾರ ವಿಶ್ವ ರೆಡ್ ಕ್ರಾಸ್ ದಿನದ ಅಂಗವಾಗಿ ಸಮಾರಂಭ ನಡೆಯಿತು.


ಈ ಸಮಾರಂಭದಲ್ಲಿ ಯುವ ರೆಡ್ ಕ್ರಾಸ್ ಘಟಕದ ಸ್ವಯಂ ಸೇವಕರಿಗೆ ಪ್ರಶಸ್ತಿ ಪ್ರದಾನ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಜರುಗಿತು. ಇದೇ ಸಂದರ್ಭದಲ್ಲಿ ಸೇವಾ ನಿವೃತ್ತಿ ಹೊಂದುತ್ತಿರುವ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿಯವರಿಗೆ ಅಭಿನಂದನೆ ನೀಡಲಾಯಿತು. ಭಾರತೀಯ ರೆಡ್ ಕ್ರಾಸ್ ಕರ್ನಾಟಕ ಶಾಖೆಯ ಉಪಾಧ್ಯಕ್ಷ ಗೋಪಾಲ ಬಿ.ಹೊಸೂರು ಅಧ್ಯಕ್ಷ ತೆಯಲ್ಲಿ,ದ.ಕ ಜಿಲ್ಲಾ ಘಟಕದ ಸಭಾಪತಿ ಸಿ.ಎ ಶಾಂತಾರಾಮ ಶೆಟ್ಟಿ ಯವರ ಉಪಸ್ಥಿತಿಯಲ್ಲಿ ಮಂಗಳೂರು ವಿ.ವಿ.ಯ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಮುಖ್ಯ ಅತಿಥಿಯಾಗಿ ಭಾಗವಹಿವಹಿಸಿದ್ದರು. ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಪ್ರಶಸ್ತಿ ಪ್ರದಾನ
ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು