2:37 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಮಂಗಳೂರಿಗೆ ರಾಜ್ಯಪಾಲ ಗೆಹಲೋಟ್ ಭೇಟಿ: ಧರ್ಮಸ್ಥಳಕ್ಕೆ ಪಯಣ; ನಾಳೆ ಉಡುಪಿ ಕೃಷ್ಣ ಮಠಕ್ಕೆ

02/12/2021, 11:38

ಮಂಗಳೂರು(reporterkarnataka.com):

ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಇಂದು ಕಡಲನಗರಿ ಮಂಗಳೂರಿಗೆ ಭೇಟಿ ನೀಡಿದರು.
ಮಂಗಳೂರು  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.


ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಸಹಾಯಕ ಆಯುಕ್ತ ಮದನ್ ಮೋಹನ್ ಸೇರಿದಂತೆ ಜಿಲ್ಲಾಡಳಿತ ಹಿರಿಯ ಅಧಿಕಾರಿಗಳು ರಾಜ್ಯಪಾಲರನ್ನು ಬರ ಮಾಡಿಕೊಂಡರು.

ನಂತರ ರಾಜ್ಯಪಾಲರು ಧರ್ಮಸ್ಥಳದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳಿದರು.

ಡಿಸೆಂಬರ್ 2 ರಿಂದ 5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರವಾಸ ಕೈಗೊಂಡಿದ್ದಾರೆ. ನಾಳೆ ಅವರು ಉಡುಪಿಗೆ ಭೇಟಿ ನೀಡುವರು.

ಇತ್ತೀಚಿನ ಸುದ್ದಿ

ಜಾಹೀರಾತು