ಇತ್ತೀಚಿನ ಸುದ್ದಿ
ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿ: ಕಡಲನಗರಿಯಲ್ಲಿ ಭಾರಿ ಸ್ವಾಗತ
19/11/2022, 11:52

ಮಂಗಳೂರು(reporterkarnataka.com: ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಬಜಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಹಾಗೂ ಜನಪ್ರತಿನಿಧಿಗಳು ಆತ್ಮೀಯವಾಗಿ ಸ್ವಾಗತಿಸಿದರು.
ಶಾಸಕಾರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್ ಹಾಗೂ ಇತರೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.