7:27 PM Monday20 - January 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಜನತೆಗೆ ಕಲುಷಿತ ನೀರು ಪೂರೈಕೆ: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ… ಭಾರತಿ ಏರ್‌ಟೆಲ್ ಮತ್ತು ಬಜಾಜ್ ಫೈನಾನ್ಸ್ ನಿಂದ ಹಣಕಾಸಿನ ಸೇವೆಗಳಿಗಾಗಿ ಅತಿದೊಡ್ಡ ಡಿಜಿಟಲ್… ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರ ಸಮ್ಮತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ… ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ… ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಮಂಗಳೂರಿನಲ್ಲಿ ಸಿಎಂ… ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ… ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ…

ಇತ್ತೀಚಿನ ಸುದ್ದಿ

ಮಂಗಳೂರಿಗೆ ಇಂದು ಸಚಿವರ ದಂಡು!; ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸುವ ಅತಿರಥ ಮಹಾರಥರು!!

02/09/2022, 00:16

ಮಂಗಳೂರು(reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಸೆ.2)ಮಂಗಳೂರಿಗೆ ಭೇಟಿ ನೀಡಲಿದ್ದು, ಪ್ರಧಾನಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಆದಿಯಾಗಿ ಸಚಿವರ ದಂಡೇ ಕಡಲನಗರಿ ಮಂಗಳೂರಿಗೆ ಆಗಮಿಸಲಿದೆ.

ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ್, ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್  ಹಾಗೂ ಶಂತನು ಠಾಕೂರ್, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಭಾಗವಹಿಸುವರು.

ಪ್ರಧಾನಿ ಮೋದಿ ಅವರು ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸುವರು.

ನಗರದ  ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ  3,800  ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ.

ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ, ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14 ರ ಯಾಂತ್ರೀಕರಣ ( 281 ಕೋಟಿ ರೂ.), ಬಿಎಸ್ VI ಉನ್ನತೀಕರಣ ಯೋಜನೆ (1829 ಕೋಟಿ ರೂ.), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (677 ಕೋಟಿ ರೂ.) ಗಳು ಸೇರಿವೆ. 

ಇದೇ ಸಂದರ್ಭದಲ್ಲಿ ನರೇಂದ್ರ ಮೋದಿ, ಎನ್ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ  (ಅಂದಾಜು ವೆಚ್ಚ ರೂ. 500 ಕೋಟಿ), ಶೇಖರಣಾ ಟ್ಯಾಂಕ್ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ ( 100 ಕೋಟಿ ರೂ.), ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ  100 ಕೋಟಿ ರೂ.) ಹಾಗೂ ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ. 100 ಕೋಟಿ) ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಜೊತೆಗೆ, ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಮಾಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು