8:54 PM Thursday16 - January 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ

16/01/2025, 20:54

ಮಂಗಳೂರು(reporterkarnataka.com): ಕಡಲ ನಗರಿ ಮಂಗಳೂರಿನಲ್ಲಿ ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ
ಹೊಸ ಪ್ರಾದೇಶಿಕ ಕೇಂದ್ರ ತಲೆ ಎತ್ತಲಿದೆ. ಹೊಸ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ. 17ರಂದು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಈ ಭಾಗದ ಪ್ರದೇಶದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವುದು ಇದರಿಂದ ಸಾಧ್ಯವಾಗಲಿದೆ. ಆರೋಗ್ಯ ಕ್ಷೇತ್ರದ ಪ್ರಗತಿಯಲ್ಲಿ ಇದು ಮಹತ್ವದ ಹೆಜ್ಜೆ ಕೂಡ ಆಗಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
1996ರಲ್ಲಿ ಪ್ರಾರಂಭವಾದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಆವಿಷ್ಕಾರಗಳು, ಉತ್ತಮ ಯೋಜನೆಗಳನ್ನು ಆರಂಭಿಸಿದೆ. ಗುಣಮಟ್ಟದ ಆರೋಗ್ಯ ಒದಗಿಸಲು ಇದು ಸಹಕಾರಿಯಾಗಿದೆ. ಬೆಳಗಾವಿ, ಕಲಬುರಗಿ ಮತ್ತು ಮಂಗಳೂರಿನಲ್ಲಿ ಪ್ರಾದೇಶಿಕ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಹೆಚ್ಚು ಜನರಿಗೆ ಆರೋಗ್ಯ ಸೌಲಭ್ಯ ಒದಗಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ.
ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯವು ಮೌಲ್ಯಮಾಪನ ಪದ್ಧತಿಗಳನ್ನು ಆಧುನೀಕರಿಸಲು ಡಿಜಿಟಲ್ ಪ್ಲಾಟ್‍ಫಾರ್ಮ್‍ಗಳನ್ನು ಪರಿಚಯಿಸಿದ ಮೊದಲ ಆರೋಗ್ಯ ವಿಶ್ವವಿದ್ಯಾಲಯವಾಗಿದೆ.
ಪ್ರತಿ ಪ್ರೋಗ್ರಾಂ ಮತ್ತು ಕೋರ್ಸ್‍ಗೆ ವಿಶಿಷ್ಟವಾದ ಮೌಲ್ಯಮಾಪನ ಬ್ಲೂಪ್ರಿಂಟ್ ಪ್ರಕಾರ ಸಮಗ್ರ ಪ್ರಶ್ನೆ ಬ್ಯಾಂಕ್ ಸ್ಥಾಪಿಸುವುದು ಈ ವಿವಿಯ ಗಮನಾರ್ಹ ಸಾಧನೆಯಾಗಿದೆ. ಮಂಗಳೂರಿನಲ್ಲಿ ಈ ಕೇಂದ್ರದ ಸ್ಥಾಪನೆಯು ಗ್ರಾಮೀಣ ಮತ್ತು ನಗರಗಳ ನಡುವಿನ ಆರೋಗ್ಯ ಶಿಕ್ಷಣದ ಅಂತರವನ್ನು ಕಡಿಮೆ ಮಾಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು