ಇತ್ತೀಚಿನ ಸುದ್ದಿ
ಮಂಗಳೂರಿಗೆ ನಾಳೆ ನೂತನ ಮೇಯರ್, ಉಪ ಮೇಯರ್: ಮಧ್ಯಾಹ್ನ 12 ಗಂಟೆಗೆ ಚುನಾವಣೆ
08/09/2022, 21:20
ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಇದೇ ಸೆ.9ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.