ಇತ್ತೀಚಿನ ಸುದ್ದಿ
ಮಂಗಳೂರಿಗೆ ಪ್ರಧಾನಿ ಆಗಮನಕ್ಕೆ ಕ್ಷಣಗಣನೆ ಆರಂಭ: 9 ಜಂಕ್ಷನ್‌ಗಳಲ್ಲಿ ಸಂಚಾರ ಮಾರ್ಗ ಬದಲಾವಣೆ; 15 ಕಡೆ ಪಾರ್ಕಿಂಗ್ ವ್ಯವಸ್ಥೆ
02/09/2022, 09:49
ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ. ಬಸ್ ಗಳ ಓಡಾಟದ ಸಂಖ್ಯೆ ಕಡಿಮೆಯಾಗಿದೆ. ಕಾರ್ಯಕ್ರಮ ನಡೆಯುವ ಕೂಳೂರು ಸಮೀಪದ ಗೋಲ್ಡ್ ಪಿಂಚ್ ಸಿಟಿಯಲ್ಲಿ ಅಂತಿಮ ಸುತ್ತಿನ ಸಿದ್ಧತೆಯೂ ಪೂರ್ಣಗೊಂಡಿದೆ.
ಪ್ರಧಾನಿ ಮೋದಿ ಭಾಗವಹಿಸುವ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದ ಕಾರ್ಯಕ್ರಮದ ಯಶಸ್ಸಿಗೆ ದ.ಕ.ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಹಿತ ಸುಮಾರು ಒಂದುವರೆ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಕೆಲವು ಫಲಾನಭವಿಗಳಿಗೆ ಯೋಜನೆಗಳ ಹಸ್ತಾಂತರ ನಡೆಯಲಿದೆ. ಮಧ್ಯಾಹ್ನ 1ಕ್ಕೆ ಕಾರ್ಯಕ್ರಮ ನಡೆಯಲಿರುವುದರಿಂದ ಸಾರ್ವಜನಿಕರು ಮುಂಚಿತವಾಗಿ ಭಾಗವಹಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.
ಫಲಾನುಭವಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ನಿರ್ದೇಶನ ನೀಡಿಲ್ಲ. ಆದರೆ ಮನವಿ ಮಾಡಲಾಗಿದೆ. ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಪ್ರಶ್ನೆಯೊಂದಕ್ಕೆ ಉತ್ತರಿಸಿದರು.