1:34 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರಿಗೆ ಪ್ರಧಾನಿ ಆಗಮನಕ್ಕೆ ಕ್ಷಣಗಣನೆ ಆರಂಭ: 9 ಜಂಕ್ಷನ್‌ಗಳಲ್ಲಿ‌ ಸಂಚಾರ ಮಾರ್ಗ ಬದಲಾವಣೆ; 15 ಕಡೆ ಪಾರ್ಕಿಂಗ್ ವ್ಯವಸ್ಥೆ

02/09/2022, 09:49

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ. ಬಸ್ ಗಳ ಓಡಾಟದ ಸಂಖ್ಯೆ ಕಡಿಮೆಯಾಗಿದೆ. ಕಾರ್ಯಕ್ರಮ ನಡೆಯುವ ಕೂಳೂರು ಸಮೀಪದ ಗೋಲ್ಡ್ ಪಿಂಚ್ ಸಿಟಿಯಲ್ಲಿ ಅಂತಿಮ ಸುತ್ತಿನ ಸಿದ್ಧತೆಯೂ ಪೂರ್ಣಗೊಂಡಿದೆ.

ಪ್ರಧಾನಿ ಮೋದಿ ಭಾಗವಹಿಸುವ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದ ಕಾರ್ಯಕ್ರಮದ ಯಶಸ್ಸಿಗೆ ದ.ಕ.ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಹಿತ ಸುಮಾರು ಒಂದುವರೆ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ.  ಕೆಲವು ಫಲಾನಭವಿಗಳಿಗೆ ಯೋಜನೆಗಳ ಹಸ್ತಾಂತರ ನಡೆಯಲಿದೆ. ಮಧ್ಯಾಹ್ನ 1ಕ್ಕೆ ಕಾರ್ಯಕ್ರಮ ನಡೆಯಲಿರುವುದರಿಂದ ಸಾರ್ವಜನಿಕರು ಮುಂಚಿತವಾಗಿ ಭಾಗವಹಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.

ಫಲಾನುಭವಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ನಿರ್ದೇಶನ ನೀಡಿಲ್ಲ. ಆದರೆ ಮನವಿ ಮಾಡಲಾಗಿದೆ. ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು