ಇತ್ತೀಚಿನ ಸುದ್ದಿ
ಮಂಗಳೂರಿಗೆ ಪ್ರಧಾನಿ: ಪದವು ಸೆಂಟ್ರಲ್ ವಾರ್ಡ್ ಕಾರ್ಯಕರ್ತರ ಸಭೆ ನಡೆಸಿದ ಶಾಸಕ ವೇದವ್ಯಾಸ ಕಾಮತ್
28/08/2022, 19:58

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಪದವು ಸೆಂಟ್ರಲ್ ವಾರ್ಡಿನ ಕಾರ್ಯಕರ್ತರ ಸಭೆ ನಡೆಸಿದರು.
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರು ಮನೆ ಮನೆಗೂ ಭೇಟಿ ನೀಡುತಿದ್ದಾರೆ. ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮ ಇತಿಹಾಸ ನಿರ್ಮಿಸಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಕಿಶೋರ್ ಕೊಟ್ಟಾರಿ, ಪೂರ್ವ ಶಕ್ತಿ ಕೇಂದ್ರದ ಉಪಾಧ್ಯಕ್ಷರಾದ ರಾಮಚಂದ್ರ ಚೌಟ, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ನರ್ಮದಾ ರೈ, ಶಕ್ತಿ ಕೇಂದ್ರ ಪ್ರಮುಖರಾದ ಹರೀಶ್ ರೈ, ರಿತೇಶ್ ಹಾಗೂ ವಾರ್ಡಿನ ಪದಾಧಿಕಾರಿಗಳು. ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.