7:47 AM Thursday16 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಮಂಗಳೂರಿನಿಂದ ಕಳವಾದ ಟೆಂಪೋ ಟ್ರಾವಲರ್ ಬೆಳಗಾವಿಯಲ್ಲಿ ವಶಕ್ಕೆ: ಉರ್ವ ಪೊಲೀಸರಿಂದ 3 ಮಂದಿ ಬಂಧನ

23/09/2023, 12:55

ಮಂಗಳೂರು(reporterkarnataka.com): ನಗರದ ಕುಂಟಿಕಾನ ಫ್ಲೈ ಓವರ್ ಬಳಿ ಪಾರ್ಕ್ ಮಾಡಿದ್ದ ಟೆಂಪೋ ಟ್ರಾವೆಲರ್ ( KA 19 AC 8179) ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೆಳಗಾವಿಯಲ್ಲಿ ಮೂವರನ್ನು ಬಂಧಿಸಿದ್ದು, ವಾಹನ ವಶಪಡಿಸಿಕೊಂಡಿದ್ದಾರೆ.
ಸೆ.14ರಂದು ರಾತ್ರಿ 8:30 ಸಮಯಕ್ಕೆ ವಾಹನವನ್ನು ಪಾರ್ಕ್ ಮಾಡಿದ್ದು ಸೆ. 15ರಂದು ಮಧ್ಯಾಹ್ನ 12: 30 ಸಮಯಕ್ಕೆ ವಾಹನ ಕಳುವಾದ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ವಾಹನ ಕಳವು ಪ್ರಕರಣದ ಆರೋಪಿಗಳ ಮತ್ತು ವಾಹನದ ಪತ್ತೆಗಾಗಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಆದೇಶದಂತೆ ಹಾಗೂ ಡಿಸಿಪಿಗಳಾ್ ಸಿದ್ದಾರ್ಥ್ ಗೋಯಲ್ ಮತ್ತು ದಿನೇಶ್ ಕುಮಾರ್ ಅವರ ಮಾರ್ಗದರ್ಶನದಂತೆ ಎಸಿಪಿ ಮಹೇಶ್ ಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಠಾಣಾ ನಿರೀಕ್ಷಕರಾದ ಭಾರತಿ ಜಿ. ಅವರ ಸಾರಥ್ಯದಲ್ಲಿ ವಿಶೇಷ ತಂಡವನ್ನು ರಚಿಸಿ ಉಪ ನಿರೀಕ್ಷಕರವಾದ ಹರೀಶ್ ಹೆಚ್ ವಿ, ಎಎಸ್ಐ ವಿನಯ್ ಕುಮಾರ್ ಎ ಎಸ್ ಐ ಉಲ್ಲಾಸ್ ಮಹಾಲೆ ಪೊಲೀಸ್ ಸಿಬ್ಬಂದಿಗಳಾದ ಗಿರೀಶ್ , ಭಾಸ್ಕರ್ , ಅಭಿಷೇಕ್ , ಪ್ರಜ್ವಲ್ ಅವರುಗಳು ಬೆಳಗಾವಿಯಲ್ಲಿ ಆರೋಪಿಗಳಾದ ಅರೀಫ್ ಉಲ್ಲಾಖಾನ್ ಯಾನೆ ಅರೀಫ್, ಅಮಿತ್ ಬಾಹುಬಲಿ ಪಂಚೋಡಿ ಯಾನೆ ಬೇಬಿ, ಸುರೇಂದ್ರ ಕುಮಾರ್ ಇವರುಗಳನ್ನು ವಶಕ್ಕೆ ಪಡೆದು ಕಳುವಾದ ಸುಮಾರು 15 ಲಕ್ಷ ಮೌಲ್ಯದ ಟೆಂಪೋ ಟ್ರಾವೆಲ್ಲೆರ್ ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು