2:46 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರಿನ ಕೊಟ್ಟಾರ ಚೌಕಿ ಸರ್ಕಲ್ ಗೆ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಹೆಸರು: ಶಾಸಕ ಡಾ. ಭರತ್ ಶೆಟ್ಟಿ

26/11/2023, 22:17

ಮಂಗಳೂರು(reporterkarnataka.com): ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವ ಕೊಟ್ಟಾರಚೌಕಿ ಜಂಕ್ಷನ್ ಸರ್ಕಲ್ ಗೆ ಇಡಲಾಗುವುದು ಎಂದು ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ.
ತಿಳಿಸಿದ್ದಾರೆ.
ಕೊಟ್ಟಾರಚೌಕಿಯಲ್ಲಿ ಅಮರ್ ಜವಾನ್ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ. ಇದರ ಜತೆಗೆ ಮಂಗಳೂರಿನಲ್ಲಿ ಕಲಿತು ಬೆಳೆದು ಅವಿನಾಭಾವ ಸಂಬಂಧ ಹೊಂದಿರುವ ಕ್ಯಾ.ಪ್ರಾಂಜಲ್ ಹೆಸರಿಡುವುದು ಸೂಕ್ತವಾಗಿದೆ .ಈ ಬಗ್ಗೆ ಮಂಗಳೂರು ಪಾಲಿಕೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆದು ಸೂಚನೆ ನೀಡಲಾಗುದು ಎಂದು ತಿಳಿಸಿದ್ದಾರೆ.
ಉತ್ತಮ ಜೀವನಕ್ಕಾಗಿ ಲಕ್ಷಾಂತರ ವೇತನ ಬರುವ ಬೇರೆ ಉದ್ಯೋಗವನ್ನು ಆರಿಸುವ ಬದಲು ಬಾಲ್ಯದಿಂದಲೇ ಸೈನ್ಯ ಸೇರಿ ದೇಶ ಸೇವೆ ಮಾಡುವ ಕ್ಯಾಪ್ಟನ್ ಪ್ರಾಂಜಲ್ ಅವರ‌ ನಿರ್ಧಾರ , ಅವರ ಸಾಹಸಗಾಥೆ ಯುವಶಕ್ತಿಗೆ ಪ್ರೇರಣೆಯಾಗಿದೆ.
ಅವರ ಕುಟುಂಬಕ್ಕೆ ಅನಿರೀಕ್ಷಿತ ಆಘಾತವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ತಿಳಿಸಿದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು