4:42 PM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಮಂಗಳೂರಿನ ಪಾದುವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

30/09/2023, 22:27

ಮಂಗಳೂರು(reporterkarnataka.com): ನಗರದ ಪಾದುವ ಕಾಲೇಜಿನ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು.


ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪನೋಂದಣಾಧಿಕಾರಿ ಹಾಗೂ ಮ್ಯಾಪ್ಸ್ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾಕರ್ ನೀರುಮಾರ್ಗ ಸಂಘವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಲೇಜು ನಾಯಕರ ಪಾತ್ರ ಯಾವ ರೀತಿ ಕಾಲೇಜಿನ ಅಭಿವೃದ್ಧಿಗೆ ಪೂರಕವಾಗುವುದು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ ಪಾದುವ ಶಿಕ್ಷಣ ಸಂಸ್ಥೆಯ ಸಂಚಾಲಕ ವಂದನೀಯ ಫಾ| ವಿನ್ಸೆಂಟ್ ಮೊಂತೇರೊ ಅವರು ಆಶೀರ್ವಾದಿಸಿ, ವಿದ್ಯಾರ್ಥಿ ಸಂಘವು ನಿರಂತರ ಪ್ರಯತ್ನದಿಂದ ಉತ್ತಮ ಚಟುವಟಿಕೆಗಳನ್ನು ನಡೆಸಿ ಕಾಲೇಜಿನ ಕೀರ್ತಿ ಹೆಚ್ಚಿಸುವಂತೆ ಸಲಹೆ ನೀಡಿದರು.
ಇನ್ನೋರ್ವ ಅತಿಥಿಯಾದ ಅಡ್ವಕೇಟ್ ಹಾಗೂ ಮಾಜಿ ಕಾರ್ಪೊರೇಟರ್ ಮರಿಯಮ್ಮ ಥೋಮಸ್‌ ಉತ್ತಮ ನಾಯಕತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ| ಅರುಣ್ ವಿಲ್ಸನ್ ಲೋಬೋ ಅವರು ಸ್ವಾಗತಿಸಿದರು. ವಿದ್ಯಾರ್ಥಿ ನಾಯಕರಿಗೆ ಪ್ರಮಾಣವಚನ ನೆರವೇರಿಸಿದರು. ಉಪಪ್ರಾಂಶುಪಾಲರಾದ ಪ್ರೊ| ರೋಶನ್ ಸಾಂತುಮಾಯೊರ್, ವಿದ್ಯಾರ್ಥಿ ಸಂಘದ ಸಂಯೋಜಕರಾದ ರಿನಾ ಹಾಗೂ ಅಕ್ಷತಾ ಹಾಗೂ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಲ್ಸನ್ ಡಿಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮೆಲಿಟಾ ಡಿಸೋಜ ವಂದಿಸಿದರು. ವಿದ್ಯಾರ್ಥಿಗಳಾದ ಆಲ್ವಿನ್ ಹಾಗೂ ಮೆಲಿಟಾ ರೊಸಾರಿಯೋ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು