11:50 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ ಹಿರಿಯ ನಾಗರಿಕರ ದಿನಾಚರಣೆ

31/10/2024, 17:11

ಮಂಗಳೂರು(reporterkarnataka.com): ನಗರದ ಹೊರವಲಯದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು. ಚರ್ಚ್ ವ್ಯಾಪ್ತಿಯ 10 ವಾರ್ಡ್ ಗಳ 82 ಮಂದಿ ಹಿರಿಯ ನಾಗರಿಕರು ಭಾಗವಹಿಸಿದ್ದರು. ಪ್ರಾರಂಭದಲ್ಲಿ ಬಲಿ ಪೂಜೆ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ವಂದನೀಯ ಫಾ. ರಿಚಾರ್ಡ್ ಕ್ವಾಡ್ರಸ್ ಅವರು ಹಿರಿಯ ನಾಗರಿಕರು ನಮಗೆ ದಾರಿ ದೀಪವಾಗಿದ್ದಾರೆ ಎಂದು ಹೇಳಿದರು.
ಚರ್ಚಿನ ಪ್ರದಾನ ಧರ್ಮ ಗುರು ವಂದನೀಯ ಫಾ. ಆಲ್ಬನ್ ಡಿ ಸೋಜಾ ಅವರು ಹಿರಿಯ ನಾಗರಿಕರಿಗೆ ಹಿತ ವಚನ ನೀಡಿದರು.
ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಪ್ಯಾಟ್ಸಿ ಮೊಂತೇರೊ, ಸ್ವಾಗತಿಸಿದರು. ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಉಪಸ್ಥಿತರಿದ್ದರು. ಹಿರಿಯ ನಾಗರಿಕರ ಪರವಾಗಿ ಚಾರ್ಲ್ಸ್ ಡಿಮೆಲ್ಲೊ ತಮ್ಮ ಅನಿಸಿಕೆ ಹೇಳಿದರು. ಪ್ಲಾವಿಯಾ ಡಿ ಸೋಜಾ ಕಾರ್ಯಕ್ರಮ ನಿರ್ವಹಿಸಿದರು. ಸಿರಿಲ್ ಫೆರ್ನಾಂಡಿಸ್ ಮತ್ತು ತಂಡದವರು ಕಿರು ನಾಟಕ ಪ್ರದರ್ಶಿಸಿದರು. ಚಾರ್ಲ್ಸ್ ಫೆರ್ನಾಂಡಿಸ್ ನಗೆ ಹನಿ ಪ್ರದರ್ಶನ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು