1:31 AM Sunday20 - July 2025
ಬ್ರೇಕಿಂಗ್ ನ್ಯೂಸ್
ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು

ಇತ್ತೀಚಿನ ಸುದ್ದಿ

ಮಂಗಳೂರಿನ ವಾಸುಕಿ ನಗರ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ 

07/10/2022, 19:52

ಮಂಗಳೂರು(reporter Karnataka.com):ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡ್‌  ವ್ಯಾಪ್ತಿಯ ವಾಸುಕಿ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. 

ಈ ವೇಳೆ ಮಾತನಾಡಿದ ಶಾಸಕ ಕಾಮತ್, ವಾಸುಕಿ ನಗರದಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ವೇದಿಕೆ ನಿರ್ಮಿಸುವ ಕುರಿತು ಸಾರ್ವಜನಿಕರ ಬೇಡಿಕೆ ಬಂದಿತ್ತು. ಆ ಪ್ರಕಾರವಾಗಿ ಪಾಲಿಕೆ ಸಂಬಂಧಪಟ್ಟ ಜಾಗದಲ್ಲಿ ವೇದಿಕೆ ಹಾಗೂ ಗ್ರೀನ್ ರೂಮ್ ನಿರ್ಮಾಣಕ್ಕೆ 20 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಹೇಳಿದರು. 

ಜಪ್ಪಿನಮೊಗರು ವಾರ್ಡಿನಲ್ಲಿ ಕಳೆದ 4 ವರ್ಷಗಳಿಂದ ಸಮರೋಪಾದಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಮಳೆಗಾಲದ ಸಂದರ್ಭದಲ್ಲಿ ಕೃತಕ ನೆರೆ ಉಂಟಾಗುವ‌ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಿದ ಕಾರಣ ಬಹು ವರ್ಷಗಳ ನಂತರ ಈ ವಾರ್ಡಿನಲ್ಲಿ ನೆರೆ ಹಾವಳಿಯ ಸಮಸ್ಯೆ ಅಷ್ಟಾಗಿ ಬಾಧಿಸಿಲ್ಲ‌. ರಸ್ತೆ ನಿರ್ಮಾಣ, ಚರಂಡಿ, ತಡೆಗೋಡೆ ನಿರ್ಮಾಣ, ದೇವಸ್ಥಾನಗಳ ಅಭಿವೃದ್ಧಿ ಸೇರಿದಂತೆ ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಮಂಗಳೂರು ‌ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ನಯನ ಆರ್. ಕೋಟ್ಯಾನ್, ಸ್ಥಳೀಯ ಕಾರ್ಪೋರೇಟರ್ ಗಳಾದ ವೀಣಾ ಮಂಗಳ,ಪ್ರವೀಣ್ ಚಂದ್ರ ಆಳ್ವ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ‌ ಶೆಟ್ಟಿ, ಮುಖಂಡರಾದ ಕಿರಣ್ ರೈ ಬಜಾಲ್, ಸುರೇಂದ್ರ ಜಪ್ಪಿನಮೊಗರು, ಭರತ್ ರಾಜ್ ಶೆಟ್ಟಿ, ಸುಕೇಶ್ ಬಜಾಲ್, ಎಂ.ಪಿ ಗಣೇಶ್, ರವೀಂದ್ರ ರಾವ್, ಎಸ್ ಕುಮಾರ್, ಪಿ.ಎ ಶ್ರೀನಿವಾಸ್, ರಮೇಶ್ ಸಹ್ಯಾದ್ರಿ, ರಾಮು, ಸಂದೇಶ್ ಶೆಟ್ಟಿ, ರಾಮ್ ಪ್ರಸಾದ್ ಶೆಟ್ಟಿ, ಉದಯ್, ವಿನ್ಸೆಂಟ್ ಡಿಸೋಜ, ಸುನಿತಾ, ಸುಜಾತ, ಪ್ರೀತಿ, ವಿದ್ಯಾ, ವಿನೋದ್ ರಾವ್, ವಿದ್ಯಾ ರಾವ್, ವಿಜಯ್, ಪ್ರವೀಣ್ ಕುಮಾರ್, ರಾಘವೇಂದ್ರ, ಸ್ನೇಹ, ಜಯಶ್ರೀ, ಸುಮತಿ, ಈಶ್ವರ್, ನಾಗೇಂದ್ರ, ಸುಪ್ರಿಯಾ, ರಾಮಚಂದ್ರ ಆಳ್ವ, ಜಯಪ್ರಕಾಶ್, ಪ್ರವೀಣ್ ನಿಡ್ಡೇಲ್, ಭಾರ್ಗವ‌ ಬಲ್ಯಾಯ, ಚಂದ್ರಶೇಖರಯ್ಯ, ರಾಘವೇಂದ್ರ ‌ಶೆಟ್ಟಿ, ಸ್ಥಳೀಯರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು