1:40 PM Saturday8 - August 2026
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಇತ್ತೀಚಿನ ಸುದ್ದಿ

ಮಂಗಳೂರಿನ ಯುವ ಮಹಿಳಾ ನ್ಯಾಯವಾದಿ ಗೀತಾ ಡಿ. ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ

24/02/2024, 15:58

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ವಕೀಲ ವೃತ್ತಿ ನಡೆಸುತ್ತಿರುವ ಗೀತಾ ಡಿ. ಅವರು 2023ನೇ ನವೆಂಬರ್ ತಿಂಗಳಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನಡೆಸಿದ ಸಿವಿಲ್ ನ್ಯಾಯಾಧೀಶರ ಆಯ್ಕೆಯ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ನಂತರ ನಡೆದ ಮೌಖಿಕ ಪರೀಕ್ಷೆಯಲ್ಲೂ ಕೂಡಾ ಉತ್ತೀರ್ಣರಾಗಿ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ಉಚ್ಚ ನ್ಯಾಯಾಲಯ ದಿನಾಂಕ 23.2..2024ರಂದು ಫಲಿತಾಂಶ ಸುತ್ತೋಲೆಯನ್ನು ಹೊರಡಿಸಿದ್ದು, ಅದರಂತ ಗೀತಾ ಡಿ. ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುತ್ತಾರೆ. ಅವರು ತಮ್ಮ ಪದವಿ ಶಿಕ್ಷಣವನ್ನು ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಪಡೆದು ನಂತರ ಕಾನೂನು ವಿದ್ಯಾಭ್ಯಾಸವನ್ನು ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ ಪಡೆದು ನಂತರ ತನ್ನ ವಕೀಲ ವೃತ್ತಿಯನ್ನು ಮಂಗಳೂರಿನ ಹೆಸರಾಂತ ವಕೀಲರಾದ ಮಯೂರ ಕೀರ್ತಿ ಹಾಗೂ ಶರತ್ ಕುಮಾರ್ ಬಿ. ಅವರ ಕಚೇರಿಯಲ್ಲಿ ಕಿರಿಯ ವಕೀಲರಾಗಿ ವೃತ್ತಿ ಆರಂಭಿಸಿ ತಮ್ಮ ವೃತ್ತಿಯನ್ನು ಮುಂದುವರಿಸುತ್ತಾ ಬಂದಿರುತ್ತಾರೆ. ನಂತರ ಗೀತಾ ಡಿ. ರವರು ವಕೀಲರಾದ ಕಾರ್ತಿಕ್ ಮಚ್ಚಿಲ ಅವರನ್ನು ವಿವಾಹವಾಗಿದ್ದು ತಮ್ಮ ವೃತ್ತಿಯನ್ನು ಮುಂದುವರಿಸುತ್ತಾ ಬಂದಿರುತ್ತಾರೆ. ಗೀತಾ ಡಿ. ಅವರು ಡಿ. ಕೊಂಬೇಗೌಡ ಹಾಗೂ ಕೋಮಲ ಅವರ ಪುತ್ರಿಯಾಗಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು