8:12 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ದೆಹಲಿ ಸಾಹಿತ್ಯ ಅಕಾಡೆಮಿಯಿಂದ ಕಥಾಸಂಧಿ ಕಾರ್ಯಕ್ರಮ

02/08/2023, 18:21

ಮಂಗಳೂರು(reporter Karnataka.com): ಸಾದ್ಯವಾದಷ್ಟು ಭಾಷಾ ಬಳಕೆ ಮತ್ತು ನಿರೂಪಣೆಯಲ್ಲಿ ಶುದ್ದತೆಯನ್ನು ಕಾಪಡಿಕೊಂಡು ಬರುವುದರ ಜತೆಗೆ ಪ್ರತಿ ಕಥೆಯಲ್ಲಿ ಸಾಮಾಜಿಕ ಸಮಸ್ಯೆಯನ್ನು ಬಿಂಬಿಸುವ ಪ್ರಾಮಾಣಿಕ ಪ್ರಯತ್ನ ಮಾಡಿರುತ್ತೇನೆ” ಎಂದು ಹಿರಿಯ ಕಥೆಗಾರ ಡಾಲ್ಪಿ ಕಾಸ್ಸಿಯಾ ಅಭಿಪ್ರಾಯಪಟ್ಟರು.
ಅವರು ನಗರದ ಕೊಡಿಯಾಲ್ ಬೈಲ್ ನ ಬಿಷಪ್ಪರ ನಿವಾಸದಲ್ಲಿ ರಾಕ್ಣೊ ವಾರಪತ್ರಿಕೆಯ ಆಶ್ರಯದಲ್ಲಿ ಸಾಹಿತ್ಯ ಅಕಾಡೆಮಿ, ದೆಹಲಿ ಆಯೋಜಿಸಿದ ಕಥಾಸಂಧಿ ಕಾರ್ಯಕ್ರಮದಲ್ಲಿ ತಮ್ಮ ಆಯ್ದ ಕಥೆ ಮಾಂಯ್ ಕಿತ್ಯಾಕ್ ರಡ್ತಾ? (ಅಮ್ಮ ಯಾಕೆ ಅಳುತ್ತಾರೆ?) ಪ್ರಸ್ತುತಪಡಿಸಿ, ಕಥನ ಕಲೆಯ ಬಗ್ಗೆ ಮಾತನಾಡುತ್ತಿದ್ದರು.
ಸಾಹಿತ್ಯ ಅಕಾಡೆಮಿ, ದೆಹಲಿ, ಕೊಂಕಣಿ ಭಾಷಾ ಸಲಹಾ ಮಂಡಳಿಯ ಸದಸ್ಯ, ಪತ್ರಕರ್ತ ಎಚ್ಚೆಮ್, ಪೆರ್ನಾಲ್ ಸಾಹಿತ್ಯ ಅಕಾಡೆಮಿಯ ವಿವಿಧ ಯೋಜನೆಗಳ ಬಗ್ಗೆ ವಿಸ್ತ್ರತ ಪರಿಚಯ ನೀಡಿ, ಕೊಂಕಣಿ ಭಾಷಿಕರು ಪ್ರತ್ಯೇಕವಾಗಿ ಸಾಹಿತಿ ಮತ್ತು ಬರಹಗಾರರು ಸಾಹಿತ್ಯ ಅಕಾಡೆಮಿಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿಸಿದರು.
ಸಾಹಿತ್ಯ ಅಕಾಡೆಮಿ, ದೆಹಲಿ ಜನರಲ್ ಕಾವ್ನ್ಸಿಲ್ ಸದಸ್ಯರೂ, ಕೊಂಕಣಿ ಭಾಷಾ ಮುಖ್ಯಸ್ಥರೂ ಆಗಿರುವ ಕವಿ ಮೆಲ್ವಿನ್ ರಾಡ್ರಿಗಸ್ ಕಥಾಕಾರರನ್ನು ವೇದಿಕೆಗೆ ಬರಮಾಡಿಕೊಂಡು ಹೂಗುಚ್ಛ ನೀಡಿ ಸ್ವಾಗತಿಸಿದರು.


ಕಥಾ ಪ್ರಸ್ತುತಿಯ ಬಳಿಕ ಕಥೆ, ಕಥಾಹಂದರ, ಆರಂಭ, ಅಂತ್ಯ ಮತ್ತು ತಿರುವುಗಳ ಬಗ್ಗೆ ಡಾಲ್ಫಿ ಕಾಸ್ಸಿಯಾ ಬೆಳಕು ಚೆಲ್ಲಿದರು. ರಾಕ್ಣೊ ಸಂಪಾದಕ ವಂ| ರೂಪೇಶ್ ಅಶೋಕ್ ಮಾಡ್ತಾ ಸಂವಾದವನ್ನು ನಡೆಸಿಕೊಟ್ಟು, ವಂದಿಸಿದರು. ಸಾಹಿತ್ಯ ಅಕಾಡೆಮಿ, ದೆಹಲಿ ಕೊಂಕಣಿ ಭಾಷಾ ಸಲಹಾ ಸಮಿತಿಯ ಸದಸ್ಯ ಸ್ಟ್ಯಾನಿ ಬೇಳಾ ಈ ಸಂದರ್ಭದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು