5:15 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ನ.18ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ: ಸಹಕಾರ ಜಾಥಾ, ವಸ್ತು ಪ್ರದರ್ಶನ; ಡಾ. ರಾಜೇಂದ್ರ ಕುಮಾರ್ ಸಾರಥ್ಯ

07/11/2023, 14:36

ಮಂಗಳೂರು(reporterkarnataka.com): 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ರಾಜ್ಯಮಟ್ಟದ ಸಹಕಾರ ಸಪ್ತಾಹವನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್‌ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ, ಖಾಸಗಿ, ಸಹಕಾರಿ ಸಹಭಾಗಿತ್ವ ಬಲಪಡಿಸುವುದು ಎಂಬ ಧ್ಯೇಯದೊಂದಿಗೆ ನಗರದ ಉರ್ವ ಕ್ರಿಕೆಟ್ ಮೈದಾನದಲ್ಲಿ ಇದೇ 18ರಂದು ಬೆಳಗ್ಗೆ 10 ಗಂಟೆಗೆ ರಾಜ್ಯಮಟ್ಟದ ಸಹಕಾರ ಸಪ್ತಾಹವನ್ನು ಆಯೋಜನೆ ಮಾಡಲಾಗಿದೆ. ಸಹಕಾರ ಜಾಥಾ 9 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆವರಣದಿಂದ ಉರ್ವ ಕ್ರಿಕೆಟ್ ಮೈದಾನದವರೆಗೆ ನಡೆಯಲಿದೆ. ಸಾಂಸ್ಕೃತಿಕ ಕಲಾ ಪ್ರಕಾರಗಳ ವಿವಿಧ ಟ್ಯಾಬ್ಲೋಗಳ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ.
ಎಂದರು.
ರಾಜ್ಯಮಟ್ಟದ ಸಹಕಾರ ಸಪ್ತಾಹವನ್ನು ಅರ್ಥಪೂರ್ಣವಾಗಿ ನಡೆಸುವ ಹಿನ್ನೆಲೆಯಲ್ಲಿ ವಸ್ತುಪ್ರದರ್ಶನ ಮಳಿಗೆ ಆಯೋಜಿಸಲಾಗಿದ್ದು, ಉದ್ಘಾಟನೆಯನ್ನು ವಿಧಾನ ಸಭಾ ಸ್ಪೀಕರ್ ಯು. ಟಿ. ಖಾದರ್ ನೆರವೇರಿಸಲಿದ್ದಾರೆ. ಸಹಕಾರ ಸಚಿವ ಕೆ. ಎನ್. ರಾಜಣ್ಣ ಸಹಕಾರ ಸಪ್ತಾಹದ ಉದ್ಘಾಟನೆ ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಎಂದು ಡಾ. ರಾಜೇಂದ್ರ ಕುಮಾರ್ ತಿಳಿಸಿದರು.
ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಅಧ್ಯಕ್ಷ ಜಿ. ಟಿ. ದೇವೇಗೌಡ ನೆರವೇರಿಸಲಿದ್ದಾರೆ. ಸಂಸದ ನಳಿನ್‌ ಕುಮಾರ್ ಕಟೀಲ್ ಅವರು ಉತ್ತಮ ಸ್ವಸಹಾಯ ಸಂಘಗಳಿಗೆ ಪುರಸ್ಕಾರವನ್ನು ಪ್ರದಾನ ಮಾಡಲಿದ್ದಾರೆ. ಸಹಕಾರ ಜಾಥಾ ಉದ್ಘಾಟನೆಯನ್ನು ಶಾಸಕ ವೇದವ್ಯಾಸ್ ಡಿ. ಕಾಮತ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ .ಭರತ್ ಶೆಟ್ಟಿ ವೈ., ಶಾಸಕರು ಹಾಗೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳ ನಿ., ಮಂಗಳೂರು ಇದರ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ ಭಾಗವಹಿಸಲಿದ್ದಾರೆ. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಕೆ. ಪಿ. ಸುಚರಿತ ಶೆಟ್ಟಿ ಅವರು ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕ್ಯಾ. ಡಾ. ಕೆ. ರಾಜೇಂದ್ರ, ಜಿಲ್ಲಾಧಿಕಾರಿ ಮುಲ್ಲೈ ಮಗಿಲನ್ , ಕಮಿಷನರ್ ಅನುಪಮ್ ಅಗ್ರವಾಲ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
70ನೇ ಅಖಿಲ ಭಾರತ ಸಹಕಾರ ಸಪ್ತಾಹದ 5ನೇ ದಿನ ನಡೆಯುವ ರಾಜ್ಯ ಮಟ್ಟದ ವಿಶಿಷ್ಟ ಕಾರ್ಯಕ್ರಮದಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಹಕಾರ ಸಂಸ್ಥೆಗಳು, ಸಹಕಾರಿಗಳು, ಸ್ವ-ಸಹಾಯ ಸಂಘದ ಸದಸ್ಯರು ಭಾಗವಹಿಸಿ, ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಿ, ಸಹಕಾರ ಚಳವಳಿ ಅರ್ಥಪೂರ್ಣವಾಗಿಸಲು ಎಲ್ಲರೂ ಸಹಕರಿಸುವಂತೆ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಡಾ. ದೇವಿಪ್ರಸಾದ್‌ ಶೆಟ್ಟಿ, ಶಶಿಕುಮಾರ್‌ ರೈ, ಸದಾಶಿವ ಉಳ್ಳಾಲ್‌, ರಾಜು ಪೂಜಾರಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಬೆಳ್ಳಿಪಾಡಿ ಪ್ರಸಾದ್‌ ಕೌಶಲ್‌ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ಸ್ಕ್ಯಾಡ್ಸ್‌ ಅಧ್ಯಕ್ಷ ರವೀಂದ್ರ ಕಂಬಳಿ , ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ. ಉಮೇಶ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು