4:30 PM Saturday5 - July 2025
ಬ್ರೇಕಿಂಗ್ ನ್ಯೂಸ್
ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ: ಅಗತ್ಯ ಜಮೀನು ವಶಪಡಿಸುವ ಕುರಿತು ನಾಳೆ ಸಭೆ

18/08/2021, 09:52

ಮಂಗಳೂರು (reporterkarnataka.com.): ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್‍ನ ಅಧ್ಯಕ್ಷ ಡಿ.ಎಸ್ ವೀರಯ್ಯ ಅವರು ಇದೇ ಆಗಸ್ಟ್ 18 ರಿಂದ 20 ರವರೆಗೆ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದು, ಮಂಗಳೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸುವ ಕುರಿತು ಆ.19ರಂದು ಸಭೆ ನಡೆಯಲಿದೆ.

ವೀರಯ್ಯ ಅವರು ಆಗಸ್ಟ್‌ 18ರ ಸಂಜೆ 6.10ಕ್ಕೆ ಮಂಗಳೂರಿಗೆ ಆಗಮಿಸಿ  ವಾಸ್ತವ್ಯ ಮಾಡುವರು. ಆಗಸ್ಟ್ 19ರ ಗುರುವಾರ ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿಯವರು, ಮಹಾನಗರಪಾಲಿಕೆ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಕೆ.ಐ.ಎ.ಡಿ.ಬಿ ಅಧಿಕಾರಿಗಳು ಹಾಗೂ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಂಗಳೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಲು ಅಗತ್ಯವಿರುವ ಜಮೀನು ನೀಡುವ ಅಥವಾ ವಶಪಡಿಸಿಕೊಳ್ಳುವ ಬಗ್ಗೆ ಹಮ್ಮಿಕೊಳ್ಳಲಾದ ಸಭೆಯಲ್ಲಿ ಭಾಗವಹಿಸುವರು. 

ಮಧ್ಯಾಹ್ನ 12.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳೂರು ಜಿಲ್ಲಾ ಲಾರಿ ಮಾಲಿಕರೊಂದಿಗೆ ಸಭೆ ನಡೆಸುವರು. ಸಂಜೆ 4 ಗಂಟೆಗೆ ಮಂಗಳೂರು ಬಂದರಿಗೆ ಭೇಟಿ ನೀಡಿ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಪರಿಶೀಲಿಸಲಿಸಿ, ಮಂಗಳೂರಿನಲ್ಲಿ ವಾಸ್ತವ್ಯ ಮಾಡುವರು. 
ಆಗಸ್ಟ್ 20ರ ಬೆಳಗ್ಗೆ 11.30ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿ ಕಚೇರಿಯ ಪ್ರಕಟಣೆ ತಿಳಿಸಿದೆ.   

ಇತ್ತೀಚಿನ ಸುದ್ದಿ

ಜಾಹೀರಾತು