3:03 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಗಳೂರಿನ ವೈಭವ ಮರುಕಳಿಸಲು ಕಾಂಗ್ರೆಸ್ ಗೆಲ್ಲಿಸಿ: ತೋಡಾರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಪದ್ಮರಾಜ್ ಆರ್. ಪೂಜಾರಿ

21/04/2024, 22:20

ಮೂಡುಬಿದರೆ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತೋಡಾರಿನಲ್ಲಿ ಕಾರ್ಯಕರ್ತರ ಸಭೆ ನಡೆಯಿತು.


ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಕಾಂಗ್ರೆಸ್ ಯಾವತ್ತೂ ಜಾತಿ, ಧರ್ಮದ ವಿಚಾರದಲ್ಲಿ ಚುನಾವಣೆ ಎದುರಿಸಿಲ್ಲ. ಅಭಿವೃದ್ಧಿ ವಿಚಾರವಾಗಿ ಮಾತ್ರ ಚುನಾವಣೆ ಎದುರಿಸಿ, ಉತ್ತಮ ಆಡಳಿತವನ್ನು ನೀಡಿದೆ. ನಮ್ಮ ಭವಿಷ್ಯ, ಮಕ್ಕಳ ಜೀವನವನ್ನು ನಿರ್ಧರಿಸುವ ಚುನಾವಣೆ ಮತ್ತೊಮ್ಮೆ ಬಂದಿದೆ. ವೈಭವದಿಂದ ಮೆರೆಯುತ್ತಿದ್ದ ಮಂಗಳೂರನ್ನು ಮತ್ತೆ ಅದೇ ವೈಭವಕ್ಕೆ ಕೊಂಡೊಯ್ಯುವ ಅಗತ್ಯವಿದೆ ಎಂದರು.
ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ನಾನು ಶಾಸಕನಾಗಿದ್ದಾಗಲೇ ಹೊಸಬರಿಗೆ ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದೆ. ಇದೀಗ ಯುವಕನಿಗೆ, ವಕೀಲನಿಗೆ ಅವಕಾಶ ನೀಡಲಾಗಿದೆ. ಸಮರ್ಥ ಅಭ್ಯರ್ಥಿ ಮಾತ್ರವಲ್ಲ, ನಾವು ಗೌರವಿಸುವಂತಹ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ. ಅವರನ್ನು ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿಕೊಂಡರು.
ಮಿಥುನ್ ರೈ ಮಾತನಾಡಿ, ಹಿಂದುಳಿದ ವರ್ಗದ ಧ್ವನಿಯಾಗಿರುವ ಪದ್ಮರಾಜ್ ಆರ್. ಪೂಜಾರಿ ಅವರ ಗೆಲುವಿಗಾಗಿ ಈಗ ನಾವೆಲ್ಲಾ ಧ್ವನಿಯಾಗಬೇಕು ಎಂದರು.
ಜಿಲ್ಲಾ ವಕ್ಫ್ ಅಧ್ಯಕ್ಷ ಅಬ್ದುಲ್ ಸಲಾಂ ತೋಡಾರ್, ರಾಜೇಶ್ ಅಡ್ಲಕೆರೆ, ಚಂದ್ರಹಾಸ್ ಸಾಧು ಸನಿಲ್, ಮೂಡುಬಿದರೆ ಉಸ್ತುವಾರಿ, ಗುರುರಾಜ್, ಬ್ಲಾಕ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ನಜೀರ್, ಇಸಾಕ್ ಹಾಜಿ, ಲತೀಫ್, ಆಸೀಫ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು