2:46 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರು: 160 ಮೀನುಗಾರ ಮಹಿಳೆಯರಿಗೆ ಶಾಖ ನಿರೋಧಕ ಪೆಟ್ಟಿಗೆ ವಿತರಣೆ

30/03/2023, 23:09

ಮಂಗಳೂರು(reporterkarnataka.com) ರಾಜ್ಯ ವಲಯ ಯೋಜನೆಯಡಿ ಮೀನುಗಾರ ಮಹಿಳೆಯರಿಗೆ ರಾಜ್ಯ ಸರಕಾರವು ಉಚಿತವಾಗಿ ನೀಡುವ ಶಾಖ ನಿರೋಧಕ ಪೆಟ್ಟಿಗೆಗಳನ್ನು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಯಲ್ಲಿ ಸಾಂಕೇತಿಕವಾಗಿ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕೇಂದ್ರ ಹಾಗೂ ರಾಜ್ಯ ಸರಕಾರವು ಮೀನುಗಾರರ ಹಿತದೃಷ್ಟಿಯಿಂದ ವಿವಿಧ ಯೋಜನೆಗಳನ್ನು, ಸವಲತ್ತುಗಳನ್ನು ಜಾರಿಗೆ ತಂದಿದೆ. ಕೇಂದ್ರ ಸರಕಾರವು ಮತ್ಸ್ಯ ಸಂಪದ ಯೋಜನೆಯಡಿ ಆಳ ಸಮುದ್ರ ಮೀನುಗಾರಿಕೆ ನಡೆಸುವವರಿಗೆ ಬೋಟ್, ಇನ್ಸುಲೇಟೆಡ್ ವಾಹನಗಳು ಸೇರಿದಂತೆ ವಿವಿಧ ಯೋಜನೆಗಳನ್ನು ನೀಡುವ ಮೂಲಕ ಮೀನುಗಾರರ ಹಿತ ಕಾಪಾಡುವ ಕೆಲಸ ಮಾಡಿದೆ. ನಗರದ ಮೀನು ಮಾರುಕಟ್ಟೆಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೂ ಕೂಡ ವಿಶೇಷವಾಗಿ ಚಿಂತನೆ ನಡೆಸಲಾಗಿದ್ದು, ಸ್ಥಳೀಯ ಮೀನುಗಾರರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ನಾಡದೋಣಿಗಳಿಗೆ ಸೀಮೆ ಎಣ್ಣೆ, ನದಿಯಲ್ಲಿ ಮೀನುಗಾರಿಕೆ ಮಾಡುವವರಿಗೆ ಬಲೆ, ಸಬ್ಸಿಡಿ ಡೀಸೆಲ್, ಮೀನುಗಾರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯಡಿ ಸ್ಕಾಲರ್ಶಿಪ್ ನೀಡುವ ಮೂಲರ ಆಸರೆಯಾಗಿದೆ. ಸದ್ಯ ರಾಜ್ಯ ವಲಯ ಯೋಜನೆಯಡಿ ನಗರದಲ್ಲಿ 160 ಮೀನು ಮಾರಾಟ ಮಹಿಳೆಯರಿಗೆ ಶಾಖ ನಿರೋಧಕ ಪೆಟ್ಟಿಗೆಗಳನ್ನು ಒದಗಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯ ಮೀನುಗಾರಿಕಾ ನಿಗಮದ ನಿಕಟಪೂರ್ವ ಅಧ್ಯಕ್ಷರಾದ ನಿತಿನ್ ಕುಮಾರ್ ಮಾತನಾಡಿ, ಬಿಜೆಪಿ ಸರಕಾರವು ಸದಾ ಬೆನ್ನೆಲುಬಾಗಿ ನಿಂತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ನೀಡಿದ ಯೋಜನೆಗಳು ಹಾಗೂ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಹಾಗೂ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಮಾಜಿ ಕಾರ್ಪೋರೇಟರ್ ಮೀರಾ ಕರ್ಕೇರ, ಮೀನು ಮಾರಾಟಗಾರ ಮಹಿಳೆಯರ ಸಂಘದ ಅಧ್ಯಕ್ಷರಾದ ಬೇಬಿ ಅಮೀನ್, ಉಪಾಧ್ಯಕ್ಷರಾದ ಮೋಹನ್, ಹದಿನಾರು ಪಟ್ನ ಮೀನುಗಾರ ಸಂಯುಕ್ತ ಸಭಾದ ಉಪಾಧ್ಯಕ್ಷ ಸುಭಾಷ್ ಕಾಂಚನ್, ಮುಖಂಡರಾದ ಹೇಮಚಂದ್ರ ಸಾಲ್ಯಾನ್, ಸುಗಂಧಿ ಉಳ್ಳಾಲ್, ಇಲಾಖೆಯ ಅಧಿಕಾರಿ ನಳಿನಿ ಮತ್ತು ಇತರೆ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು